ಎಡಿಎಚ್‌ಒ ಕಚೇರಿ ಕಟ್ಟಡ ಲೋಕಾರೆ​‍್ಣ

 ಎಡಿಎಚ್‌ಒ ಕಚೇರಿ ಕಟ್ಟಡ ಲೋಕಾರೆ​‍್ಣ  ADHO Office Building Inaugurated


ಚಿಕ್ಕೋಡಿ 23: ಪಟ್ಟಣದ ಅಶೋಕನಗರ ಬಡಾವಣೆಯಲ್ಲಿ ಸುಮಾರು 6.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ (ಎಡಿಎಚ್‌ಒ) ಕಚೇರಿಯ ನೂತನ ಕಟ್ಟಡವನ್ನು ಲೋಕಾರೆ​‍್ಣ ಮಾಡಲಾಯಿತು.  

ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ, ಗಡಿ ಭಾಗದ ಜನರಿಗೆ ಆರೋಗ್ಯ ಸೇವೆ ಸುಲಭವಾಗಿ ದೊರೆಯುವಂತೆ ಚಿಕ್ಕೋಡಿಯಲ್ಲಿ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಶೀಘ್ರದಲ್ಲೇ ವೈದ್ಯರು ಮತ್ತು ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಸದಲಗಾ ಪಟ್ಟಣದಲ್ಲೂ ಸರ್ಕಾರಿ ಆಸ್ಪತ್ರೆ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.  

ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರ ಸಹಕಾರದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಸಮರ​‍್ಕವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡದ ಮಾತನಾಡಿ, ನೂತನ ಕಟ್ಟಡ ನಿರ್ಮಾಣವಾಗಿರುವುದು ಸಂತಸದ ಸಂಗತಿ. ವೈದ್ಯರು ಹಾಗೂ ಸಿಬ್ಬಂದಿಗೆ ವಸತಿಗೃಹ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಎಡಿಎಚ್‌ಒ ಡಾ. ಸೋಮನಗೌಡ ಪಾಟೀಲ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.