ಗಡಿಭಾಗದ ವಿದ್ಯಾರ್ಥಿಗಳಿಗೆ ಎಜಿಎಂ ಕಾಲೇಜು ಆರಂಭ
AGM College opens for border students
ಚಿಕ್ಕೋಡಿ 1: ಗಡಿಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಶಮನೇವಾಡಿಯಲ್ಲಿ ಎಜಿಎಂ ಇಂಜಿನಿಯರಿಂಗ್ ಕಾಲೇಜು ಆರಂಭಿಸಲಾಗಿದೆ ಎಂದು ರಾಷ್ಟ್ರಸಂತ ಶ್ರೀ 108 ಗುಣಧರನಂದಿ ಮಹಾರಾಜರು ಹೇಳಿದರು.
ತಾಲೂಕಿನ ಶಮನೇವಾಡಿ ಹೊರವಲಯದಲ್ಲಿರುವ ಕಾಲೇಜಿನ ಕಟ್ಟಡದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಿ ಮಹಾರಾಷ್ಟ ಗಡಿಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಲಭ್ಯವಾಗಬೇಕೆಂಬ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಕಾರ್ಯಾರಂಭ ಮಾಡಿದೆ ಎಂದು ತಿಳಿಸಿದರು.
“ಬಡ ಕುಟುಂಬದಲ್ಲಿ ಜನಿಸಿದ ನನಗೆ ಶಿಕ್ಷಣ ಪಡೆಯಲು ಎದುರಾದ ಸಂಕಷ್ಟಗಳು ಮತ್ತೊಬ್ಬ ವಿದ್ಯಾರ್ಥಿಗೆ ಎದುರಾಗಬಾರದು ಎಂಬ ಸಂಕಲ್ಪದಿಂದ 2007ರಲ್ಲಿ ಎಸ್.ಡಿ.ಎಂ. ಟ್ರಸ್ಟ್ ಮೂಲಕ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಲಾಯಿತು. ಪ್ರಸ್ತುತ ಟ್ರಸ್ಟ್ನಡಿ ವಿವಿಧೆಡೆ 15 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಶಕಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ಸದ್ಯ ಸುಮಾರು 8,000 ವಿದ್ಯಾರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ,” ಎಂದು ಹೇಳಿದರು.
ಹೊಸ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಹಾಗೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗಗಳಲ್ಲಿ ಬಿ.ಇ. ಪದವಿ ಶಿಕ್ಷಣ ಆರಂಭಿಸಲಾಗಿದೆ ಎಂದು ತಿಳಿಸಿದರು.
ಕಾಲೇಜಿನಲ್ಲಿ ಅನುಭವಿ ಬೋಧಕ ವರ್ಗ, ಡಾಕ್ಟರೇಟ್ ಪದವೀಧರ ಪ್ರಾಧ್ಯಾಪಕರು ಸೇವೆ ಸಲ್ಲಿಸಲಿದ್ದು, ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ, ವಿದ್ಯಾರ್ಥಿವೇತನ, ಉಚಿತ ಬಸ್ ಸೌಲಭ್ಯ ಹಾಗೂ ಮೊದಲ ವರ್ಷದಿಂದಲೇ ತರಬೇತಿ ಮತ್ತು ಕ್ಯಾಂಪಸ್ ನೇಮಕಾತಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಹೇಳಿದರು.
ಐಐಟಿ ತಜ್ಞರಿಂದ ಆನ್ಲೈನ್ ತರಬೇತಿ, ಮಾಸಿಕ ವಿಶೇಷ ಉಪನ್ಯಾಸ, ಪ್ರತಿ ಶನಿವಾರ ತಜ್ಞರ ಮಾರ್ಗದರ್ಶನ, ಆರೋಗ್ಯ ಜಾಗೃತಿ ಶಿಬಿರ ಹಾಗೂ ವಿಜ್ಞಾನ ಮೇಳಗಳನ್ನು ಆಯೋಜಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕಿ ಭಾಗ್ಯಶ್ರೀ ಅಲಗೂರೆ, ಪ್ರಾಚಾರ್ಯ ಡಾ. ಆರಿ್ಪ. ಪಾಟೀಲ, ಉಪಪ್ರಾಚಾರ್ಯ ಡಾ. ಬಿ.ಜೆ. ಪಾಟೀಲ, ಡಾ. ಸಂಜಯ ಅಂಕಲಿ, ಡಾ. ಸಚಿನ್ ಮೆಕ್ಕಳಕಿ, ಡಾ. ಶಾಂತಭೂಷಣ ಬಿ.ಎಂ., ಡಾ. ಶಶಿಕಾಂತ ವಾಳಕೆ, ಕೆ.ಆರ್. ಪಾಟೀಲ, ಅಭಿಜಿತ್ ಅಕ್ಕಿವಾಟೆ, ಅಶ್ವಿನಿ ಫರಲಾದ, ಸ್ನೇಹಾ ವಾಳಕೆ, ಅಶ್ವಿನಿ ಮೊನಾಚಾರ್ಯ, ವೈಶ್ಯವ ಶೆಗಳೆ, ರಾಣಿ ಸುತಾರೆ ಹಾಗೂ ರವಿ ವಾಳಕೆ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 