ಎಐ ತಂತ್ರಜ್ಞಾನದ ಜಾಗೃತಿ ಅಭಿಯಾನ: ಉಪನ್ಯಾಸ ಕಾರ್ಯಕ್ರಮ
AI Technology Awareness Campaign: Lecture Program
ಧಾರವಾಡ 27: ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಹಾಗೂ ಗುರುಕುಲ ಅಕಾಡೆಮಿ ಇವರ ಸಂಯುಕ್ತ ಆಶ್ರಯದಲ್ಲಿ 2ನೇ ಯುವ ಚಿಂತನಾ ಸಮಾವೇಶದ ಅಂಗವಾಗಿ ಧಾರವಾಡ ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಯ ಕಾಲೇಜುಗಳಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ನಡೆಯುವ ಸಾಂಸ್ಕೃತಿಕ, ಜಾಗೃತ ಕಾರ್ಯಕ್ರಮಗಳ ಪ್ರಯುಕ್ತ ಎ. ಐ. ತಂತ್ರಜ್ಞಾನದ ಜಾಗೃತಿ ಅಭಿಯಾನದಲ್ಲಿ ಉಪನ್ಯಾಸ
ಕಾರ್ಯಕ್ರಮವನ್ನು ದಿ. 28ರ ಶುಕ್ರವಾರ ಸಂಜೆ 5:30 ಗಂಟೆಗೆ ದಾಸನಕೊಪ್ಪ ವೃತ್ತದಲ್ಲಿರುವ ಗುರುಕುಲ ಕರಿಯರ್ ಅಕಾಡೆಮಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿವಿಲ್ ಅಭಿಯಂತರರಾದ ಪವನಕುಮಾರ್ ಬೆಟಗೇರಿ ಮಾಡುವರು. ಅಧ್ಯಕ್ಷತೆಯನ್ನು ಗುರುಕುಲ ಕರಿಯರ್ ಅಕಾಡೆಮಿಯ ಸಂಸ್ಥಾಪಕರಾದ ಎಸ್.ಎಮ್ ಪಾಟೀಲ ವಹಿಸುವರು. ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಐಐಐಟಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ. ವಸುದೇವ ಪರ್ವತಿ ನೀಡುವರು. ಮುಖ್ಯ ಅತಿಥಿಗಳಾಗಿ ಟರ್ಬೋಸ್ಟೀಲ್ ನ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕರಾದ ರವಿ ಕುಳೆನೂರ ಹಾಗೂ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಎಸ್ ಫರಾಸ, ಸಮಾವೇಶದ ಸರ್ವಾಧ್ಯಕ್ಷರಾದ ಸುನೀಲ ಬಾಗೇವಾಡಿ ಆಗಮಿಸುವರು.
2ನೇ ಯುವಚಿಂತನಾ ಸಮಾವೇಶದ ಸಂಯೋಜಕರಾದ ಅರುಣಕುಮಾರ ಶೀಲವಂತ ಗೌರವ ಉಪಸ್ಥಿತರಿರುವರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 