ಹೆಚ್‌ಎಸ್ಕೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈ ವರ್ಷದಿಂದ ಎಐ ಕೋರ್ಸ
AI course to start this year at HSK Polytechnic College
ಬಳ್ಳಾರಿ 16: ನಗರದ ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿನಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ ಪ್ರಭಲಿಂಗ ತಿಳಿಸಿದ್ದಾರೆ.ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಿಂದಲೇ ವಿದ್ಯಾರ್ಥಿಗಳಿಂದ ಎಐ ಕೋರ್ಸ್ಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ಸಹಕಾರದಿಂದ ಸರ್ಕಾರದ ಅನುಮತಿ ಪಡೆದು ಈ ವರ್ಷದಿಂದಲೇ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಈ ವರ್ಷ ಎಐ ಕೋರ್ಸ್ಗೆ ಅನುಮತಿ ಪಡೆದ ನಾಲ್ಕು ಕಾಲೇಜುಗಳಲ್ಲಿ ಈ ಕಾಲೇಜು ಕೂಡೊಂದಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಇದು ಮೊದಲ ಪಾಲಿಟೆಕ್ನಿಕ್ ಕಾಲೇಜು ಎಂಬುದು ವಿಶೇಷವಾಗಿದೆ. ಈ ಕೋರ್ಸ್ಗೆ 60 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದ್ದು, ವಾರ್ಷಿಕ ಶುಲ್ಕವನ್ನು ?40,000 ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.ಕಾಲೇಜಿನಲ್ಲಿ ಮೆಕಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಸೇರಿದಂತೆ ಒಟ್ಟು ಏಳು ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ವರ್ಷ ‘ಫೈರ್ ಅಂಡ್ ಸೇಫ್ಟಿ’ ಕೋರ್ಸ್ ಆರಂಭಿಸುವ ಉದ್ದೇಶವಿದೆ. ಜೊತೆಗೆ ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಕಾರ್ಯಕ್ರಮಗಳನ್ನು ಆರಂಭಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.
ಪ್ರಸ್ತುತ ಕಾಲೇಜಿನಲ್ಲಿ 496 ಇಂಟೇಕ್ ಇದ್ದು, ಒಟ್ಟು 1,150 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. 58 ಬೋಧಕ ಸಿಬ್ಬಂದಿ ಸೇರಿ ಒಟ್ಟು 80 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೇ.100 ದಾಖಲಾತಿ ಮತ್ತು ಶೇ.80 ಫಲಿತಾಂಶ ಸಾಧನೆ ಹೊಂದಿರುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಬಾಣಾಪುರ ಶ್ರೀಶೈಲಗೌಡ ಹಾಗೂ ವಿಭಾಗ ಮುಖ್ಯಸ್ಥರಾದ ನಾಗರಾಜ್, ಗೌಸಿಯಾ ಬೇಗಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 