ಪರಿಣಾಮಕಾರಿ ಬೋಧನೆಯಲ್ಲಿ ಎಐ ಬಲು ಉಪಯುಕ್ತವಾಗಿದೆ; ಭುವನ್ ಕೌಲಗಿ ಅಭಿಮತ
AI is very useful in effective teaching; Bhuvan Kaulagi believes
ಲೋಕದರ್ಶನ ವರದಿ
ಕಲಿಕೆಯಲ್ಲಿ ಕೇವಲ ಜ್ಞಾನ ಹೊಂದಿದರೆ ಸಾಲದು ಅದಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕೌಶಲ್ಯವನ್ನು ಹೊಂದಿರಬೇಕು. ಅದರಲ್ಲೂ ಪ್ರಸ್ತುತ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆಯ ಸಮರ್ಕ ಬಳಕೆಯನ್ನು ಅರಿತುಕೊಂಡಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಪರಿಣಾಮಕಾರಿಯಾಗಿ ಕಲಿಸಿಕೊಡುವುದಕ್ಕೆ ಸಾಧ್ಯವಾಗುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಭುವನ ಕೌಲಗಿ ಹೇಳಿದರು.
ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ಬೋಧನೆಯಲ್ಲಿ ಎಐ ಬಳಕೆಯ ಕುರಿತು ಉಪನ್ಯಾಸಕರಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನುದ್ಧೇಶಿಸಿ ಮಾತನಾಡಿದ ಅವರು; ಪ್ರಪಂಚವೂ ನಿತ್ಯವೂ ಪರಿರ್ತನೆ ಹೊಂದುತ್ತ ಸಾಗುತ್ತಿದೆ. ಅದಕ್ಕೆ ಅನುಗುಣವಾಗಿ ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಲಿವೆ. ಅದಕ್ಕೆ ತಕ್ಕಂತೆ ನಾವು ಕೂಡ ಬದಲಾಗುತ್ತಲೇ ಸಾಗಬೇಕು. ಅದರಲ್ಲೂ ಬೋಧನಾ ಕ್ಷೇತ್ರದ ಮೇಲೆ ಗುರುತರವಾದ ಜವಾಬ್ದಾರಿ ಇರುವುದರಿಂದ ಉಪನ್ಯಾಸಕರು ಮೊದಲು ಶಿಕ್ಷಣದಲ್ಲಿ ತಂತ್ರಜ್ಞಾನದ ಅಳವಡಿಕೆ ಹೇಗೆ ಮಾಡಿಕೊಳ್ಳಬೇಕು ಎನ್ನುವುದನ್ನು ಕಲಿತುಕೊಂಡಿರಬೇಕು.
ಅದರಲ್ಲೂ ಪ್ರಸ್ತುತ ಸನ್ನಿವೇಶದಲ್ಲಿ ನೀಟ್, ಜೆಇಇ ಕುರಿತು ತರಬೇತಿ ನೀಡುವ ಸಂದರ್ಭದಲ್ಲಿ ಎಐ ಬಳಕೆ ಮಾಡಿಕೊಂಡಲ್ಲಿ ಕಲಿಕೆಯು ವೇಗವನ್ನು ಪಡೆದುಕೊಳ್ಳುತ್ತದೆ. ಮತ್ತು ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ವಿಷಯವನ್ನು ಕಡಿಮೆ ಸಮಯದಲ್ಲಿ ತಲುಪಿಸುವುದಕ್ಕೂ ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಪರೀಕ್ಷೆಗಳನ್ನು ಎದುರಿಸುವ ಸವಾಲು ಎದುರಾಗುತ್ತವೆ. ಆದರೆ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡವ ರೀತಿಯಲ್ಲಿ ಪರಿಣಾಮಕಾರಿ ಬೋಧನೆ ಮಾಡಿದಲ್ಲಿ ಯಾವ ಮಗುವು ಸಹ ಎಂಥ ಪರೀಕ್ಷೆಯಲ್ಲಿಯೂ ಹಿಂಬೀಳುವುದಕ್ಕೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ನಮ್ಮ ಉಪನ್ಯಾಸಕ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕೃತಕ ಬುದ್ಧಿಮತ್ತೆಯ ತರಬೇತಿ ಕಾರ್ಯಾಗಾರವು ಅತ್ಯಂತ ಉಪಯುಕ್ತವಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ಎಐ ತರಬೇತುದಾರ ಆದಿತ್ಯಾ ಮಾಲೂರ ಮಾತನಾಡಿ; ಈ ಕೃತಕ ಬುದ್ಧಿಮತ್ತೆ ಎಂಬುದು ಸರಿಯಾದ ಮಾರ್ಗದಲ್ಲಿ ಬಳಸಿಕೊಂಡರೆ ಅದು ಮನುಕುಲಕ್ಕೆ ಸಿಕ್ಕ ವರವಾಗುತ್ತದೆ. ಅದರಲ್ಲೂ ಉಪನ್ಯಾಸಕರು ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗುವ ಹಾದಿಗೆ ಕರೆದುಕೊಂಡು ಹೋಗುವಾಗ ಈ ಎಐ ನೆರವಿಗೆ ಬರುತ್ತದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣೀತ ಹಾಗೂ ಜೀವಶಾಸ್ತ್ರದಂತ ವಿಷಯಗಳನ್ನು ಬೋಧಿಸುವ ಸಂದರ್ಭದಲ್ಲಿ ಬಳಸಿಕೊಳ್ಳುವ ಎಐ ಟೂಲ್‌ಗಳು ನಮ್ಮ ಬೋಧನೆಯನ್ನು ಮತ್ತಷ್ಟು ಚುರುಕುಗೊಳಿಸುತ್ತವೆ. ಮಕ್ಕಳ ಗಮನವನ್ನು ಕೇಂದ್ರೀಕರಿಸುವುದರೊಂದಿಗೆ ಅವರು ಹೆಚ್ಚಿನ ಅಂಕಗಳನ್ನು ಪಡೆದುಕೊಳ್ಳುವುದಕ್ಕೆ ನೆರವಾಗುತ್ತದೆ.
ಈ ಕಾರಣದಿಂದಾಗಿಯೇ ಇಂದು ಎಕ್ಸಲಂಟ್ ಕಾಲೇಜಿನ ಉಪನ್ಯಾಸಕರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳು ಮುಂದಿನ ದಿನಗಳಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ಉತ್ತಮ ಅಂಕಗಳನ್ನು ಪಡೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಈ ಕಾರ್ಯಾಗಾರದಲ್ಲಿ ಪ್ರಾಂಶುಪಾಲ ಮಂಜುನಾಥ ಮ. ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ ಸೇರಿದಂತೆ ಎಲ್ಲ ಉಪನ್ಯಾಸಕರು ಭಾಗವಹಿಸಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 