ತರಗತಿ ಬಹಿಷ್ಕರಿಸಿ ಎಐಡಿಎ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳ ಪ್ರತಿಭಟನೆ
AIDA-led graduate students boycott classes and protest
ಧಾರವಾಡ 27: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಈ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಎಐಡಿಎ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಆಗ್ರಹಿಸಿ ಇಂದು ರಾಜ್ಯದಾದ್ಯಂತ ಎಐಡಿಎ? ವಿದ್ಯಾರ್ಥಿ ಸಂಘಟನೆಯು ಪದವಿ ತರಗತಿಗಳ ಬಹಿಷ್ಕಾರಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಎದುರುಗಡೆ ಸೇರಿದ ವಿದ್ಯಾರ್ಥಿಗಳು ಗೇಟ್ ಹಾಕಿ, ಗೇಟುಗಳ ಮೇಲೆ ತಮ್ಮ ಬೇಡಿಕೆಗಳ ಫಲಕಗಳನ್ನಿಟ್ಟು ಪ್ರತಿಭಟನೆ ನಡೆಸಿದರು. ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ತರಗತಿಗಳು ಸರಾಗವಾಗಿ ನಡೆಯುತ್ತಿದ್ದು ಆಂತರಿಕ ಪರೀಕ್ಷೆಗಳನ್ನು ಮುಗಿಸಿ ಅಲ್ಲಿನ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ಪ್ರತಿದಿನ 30-40 ಕಿಲೋ ಮೀಟರ್ ಪ್ರಯಾಣ ಮಾಡಿ ಬಂದು ಕೇವಲ ಖಾಲಿ ಬೋರ್ಡ್ ಹಾಗೂ ಗೋಡೆ ನೋಡಿ ಮನೆಗೆ ಮರಳುತ್ತಿದ್ದಾರೆ. ಸಮಸ್ಯೆಗೆ ಸರಿಯಾದ ಪರಿಹಾರ ಒದಗಿಸದೆ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗುತ್ತಿರುವ ಮತ್ತು ಸರ್ಕಾರಿ ಕಾಲೇಜು ಹಾಗೂ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಭೀಕರ ತಾರತಮ್ಯ ಸೃಷ್ಟಿಸಿರುವ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎ? ನ ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಮಾತನಾಡಿ, 2025-26ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ ದಾವಣಗೆರೆ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆಯಲಿವೆ. ಹೀಗಾದಲ್ಲಿ, ಇನ್ನೂ ಸರಿಯಾಗಿ ತರಗತಿಗಳೇ ಆರಂಭವಾಗಿರದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಘೋರ ಅನ್ಯಾಯವಾಗುತ್ತದೆ. ಆದ್ದರಿಂದ ಸರ್ಕಾರವು ಕೂಡಲೇ ಪರೀಕೆಗಳನ್ನು ಮುಂದೂಡಬೇಕು ಮತ್ತು ಅವಶ್ಯಕ ತರಗತಿಗಳನ್ನು ನಡೆಸಿದ ನಂತರವಷ್ಟೇ ರಾಜ್ಯದಲ್ಲಿ ಪದವಿ ಪರೀಕ್ಷೆಗಳನ್ನು ನಡೆಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಹೋರಾಟದ ಮುಂದಿನ ನಡೆಯಾಗಿ, ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ್ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕಾರದ ಹಿನ್ನಲೆಯಲ್ಲಿ ತೀರ್ಮಾನಿಸಲಾಯಿತು. ಅತಿಥಿ ಉಪನ್ಯಾಸಕರಿಲ್ಲದೇ, ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಪದವಿ ಕಾಲೇಜುಗಳಿಗಾಗಿ ಮಾತ್ರ ಇರುವುದೇ ಎಂದು ಪ್ರಶ್ನೆ ಮಾಡಿದರು. ಅವಶ್ಯಕ ತರಗತಿಗಳನ್ನು ನಡೆಸದೆ ಪರೀಕ್ಷೆ ನಡೆಸಬಾರದು ಮತ್ತು ಈಗ ಘೋಷಣೆಯಾಗಿರುವ ಸರ್ಕಾರಿ ವಿಶ್ವವಿದ್ಯಾಲಯಗಳ ಪರೀಕ್ಷಾ ದಿನಾಂಕಗಳನ್ನು ಮುಂದೂಡಬೇಕೆಂಬ ಬೇಡಿಕೆಯೊಂದಿಗೆ ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಕಚೇರಿ ಕಾರ್ಯದರ್ಶಿ ಸ್ಪೋರ್ತಿ ಚಿಕ್ಕಮಠ, ಕಾರ್ಯಕರ್ತರಾದ ಸಿದ್ದು, ಚಂದ್ರು ಸೇರಿದಂತೆ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 