ಕುರುಗೋಡು ಕಾಲೇಜಿನಲ್ಲಿ ಏಡ್ಸ್ ಜಾಗೃತಿ
AIDS Awareness at Kurugodu College
ಬಳ್ಳಾರಿ 22: ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಮೊಬಿಲೈಸೇಷನ್ ಫಾರ್ ಏಡ್ಸ್ ಸುರಕ್ಷಾ ಅಭಿಯಾನ-2026’ ಹಾಗೂ ರಾಜ್ಯಮಟ್ಟದ ಮಾಸ್ಕಾಟ್ ಸ್ಪರ್ಧೆಯ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.
ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕೆ-ಸ್ಯಾಪ್ಸ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ.ಶಾಂತಲಾ ಉದ್ಘಾಟಿಸಿದರು.
ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ಆಪ್ತ ಸಮಾಲೋಚಕ ಕರಿಬಸವ ಎನ್. ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಎಚ್ಐವಿ ಸ್ಥಿತಿಯನ್ನು ಪರೀಕ್ಷಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳ ಐಸಿಟಿಸಿ, ಎಆರಿ್ಟ ಮತ್ತು ಎಸ್ಟಿಐ ಕೇಂದ್ರಗಳಲ್ಲಿ ಗೌಪ್ಯವಾಗಿ ಉಚಿತ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಲಭ್ಯವಿದೆ ಎಂದು ತಿಳಿಸಿದರು. ಉಚಿತ ಸಹಾಯವಾಣಿ 1097ಕ್ಕೆ ಸಂಪರ್ಕಿಸಬಹುದು ಎಂದರು.
25 ಸಾವಿರ ಬಹುಮಾನದ ಮಾಸ್ಕಾಟ್ ಸ್ಪರ್ಧೆ
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಆಯೋಜಿಸಿರುವ ರಾಜ್ಯಮಟ್ಟದ ಮಾಸ್ಕಾಟ್ ಸ್ಪರ್ಧೆಯಲ್ಲಿ ಭರವಸೆ, ಜಾಗೃತಿ ಮತ್ತು ಎಚ್ಐವಿ ತಡೆಗಟ್ಟುವಿಕೆಯನ್ನು ಬಿಂಬಿಸುವ ಸ್ವಂತಿಕೆಯ ವಿನ್ಯಾಸಗಳನ್ನು ಸಲ್ಲಿಸಬಹುದಾಗಿದೆ. ವಿಜೇತರಿಗೆ ?25,000 ನಗದು ಬಹುಮಾನ ನೀಡಲಾಗುತ್ತದೆ.
ವಿನ್ಯಾಸದ ಮೇಲೆ ಹೆಸರು ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ, ಉತ್ತಮ ಗುಣಮಟ್ಟದ ಸ್ಕ್ಯಾನ್ ಪ್ರತಿಯನ್ನು ಚಿಠಿಟಛಿಛಿಠಅರಟಚಿಟ.ಛಿಠಗೆ ಇ-ಮೇಲ್ ಮಾಡಬೇಕು. ಆಗಸ್ಟ್ 31 ಕೊನೆಯ ದಿನವಾಗಿದೆ.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮಂಜುನಾಥ, ವೀರಲಿಂಗಪ್ಪ, ವಿಶ್ವನಾಥ, ಪ್ರಥಮ ದರ್ಜೆ ಸಹಾಯಕ ಗಣೇಶ್, ಸ್ನೇಹಾ ಕ್ಲಿನಿಕ್ ಆಪ್ತ ಸಮಾಲೋಚಕ ಮಹಬೂಬ್ ಭಾಷಾ ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 