ಎಐಡಿಎಸ್‌ಓ: ದಲಿತ ಬಾಲಕನ ಮೇಲೆ ಹೇಯ ಘಟನೆ
AIDSO: Heinous incident on Dalit boy
ಎಐಡಿಎಸ್‌ಓ: ದಲಿತ ಬಾಲಕನ ಮೇಲೆ ಹೇಯ ಘಟನೆ
ಕೊಪ್ಪಳ 25: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹೇಯ ಘಟನೆ ವರದಿಯಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ಇಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಳಿಬಂದಿದೆ.ಇದರಿಂದ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾತಿ ಕಾರಣಕ್ಕೆ ಮನುಷ್ಯನೊಬ್ಬನನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡ ಈ ಘಟನೆ ಸಮಾಜದಲ್ಲಿನ ಕರಾಳತೆಗೆ ಮತ್ತು ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಈ ಘಟನೆಯನ್ನು ಎಐಡಿಎಸ್‌ಓ ಕರ್ನಾಟಕ ಜಿಲ್ಲಾ ಸಮಿತಿಯು ಅತ್ಯಂತ ಕಟುವಾದ ಪದಗಳಲ್ಲಿ ಖಂಡಿಸುತ್ತದೆ. ತಪ್ಪಿತಸ್ಥರಿಗೆ ಕೂಡಲೇ ಉಗ್ರ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.ಹೇಳಿಕೆ ಇವರಿಂದ, ಗಂಗರಾಜ ಅಳ್ಳಳ್ಳಿ ಜಿಲ್ಲಾ ಸಂಚಾಲಕರು
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು 