ಕೊಪ್ಪಳದ ಮಾನ್ಯ ಶಾಸಕರ ನಡೆಗೆ ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಖಂಡನೆ!
AIDSSO District Coordinator Gangaraj Allalli condemns the actions of the honorable MLA from Koppal!
ಕೊಪ್ಪಳ 23: 7 ಜನವರಿ 2026 ತೀವ್ರ ವಿರೋಧದ ನಡುವೆಯೂ ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ಹ್ಯಾಟಿ ಗ್ರಾಮದ ಸುತ್ತಲಿನ ಶಾಲೆಗಳನ್ನು ಮುಚ್ಚುವ ಹುನ್ನಾರದಿಂದ ಕೆಪಿಎಸ್ ಮಾಗ್ನೆಟ್ ಶಾಲೆಯನ್ನು ಮಾಡಲು ಮುಂದಾಗಿರುವ ಕೊಪ್ಪಳದ ಮಾನ್ಯ ಶಾಸಕರ ನಡೆಗೆ ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಖಂಡನೆ! ಗ್ರಾಮೀಣ ಭಾಗದ 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೊಂದರಂತೆ ಕೇವಲ 6 ಸಾವಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರವು ಮುಂದಾಗಿದೆ. ಮೊದಲ ಹಂತದಲ್ಲೇ 900 ಮ್ಯಾಗ್ನೆಟ್ ಶಾಲೆ ಮಾಡಲು ಆದೇಶಿಸಲಾಗಿದೆ. ಈ ಆದೇಶದಂತೆ ಕೊಪ್ಪಳದಲ್ಲಿನ 350 ಕ್ಕೂ ಹೆಚ್ಚು ಶಾಲೆಗಳು ಮುಚ್ಚುವ ಪಟ್ಟಿಯಲ್ಲಿವೆ,
ಹ್ಯಾಟಿಯಲ್ಲಿ ಅಧಿಕೃತವಾಗಿ ಮಾನ್ಯ ಶಾಸಕರು ಇದಕ್ಕೆ ಚಾಲನೆ ನೀಡುತ್ತಿರುವುದು ಅವರ ಶಿಕ್ಷಣ ವಿರೋಧಿ ಬಡವರ ವಿರೋಧಿ ನಡೆಯನ್ನು ಎತ್ತಿ ತೋರಿಸುತ್ತದೆ.ಈ ಉದ್ದೇಶಕ್ಕಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗಾಗಿ ಇರುವ ಏಏಖಆಃ ನಿಧಿಯಿಂದ 700ಕೋಟಿ ಹಣ ಪಡೆಯಲಾಗಿದೆ. ಅಲ್ಪಸಂಖ್ಯಾತರ ನಿಧಿಯಿಂದ 100ಕೋಟಿ ಪಡೆಯಲಾಗಿದೆ. ಜನಕಲ್ಯಾಣಕ್ಕಾಗಿ ಬಳಸಬೇಕಾದ ನಿಧಿಯನ್ನು ಅದೇ ಜನರ ಮಕ್ಕಳು ಓದುವ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಳಸಲಾಗುತ್ತಿದೆ. ಇದು ಈ ಜನರಿಗೆ ಮಾಡುತ್ತಿರುವ ವಿಶ್ವಾಸ ದ್ರೋಹವಾಗಿದೆ.
ಮೂಲಭೂತ ಸೌಲಭ್ಯಗಳಿಲ್ಲದೇ ನರಳುತ್ತಿರುವ ಶಾಲೆಗಳ ದುರಸ್ತಿಗೆ ಯಾವುದೇ ಕಾರಣಕ್ಕೂ ಈ ಅನುದಾನ ಬಳಸಬಾರದೆಂಬ ಆಘಾತಕಾರಿ ಅಂಶವನ್ನು ಡಿ. 30ರಂದು ಹೊರಡಿಸಿರುವ ಈ ಆದೇಶದಲ್ಲಿ ತಿಳಿಸಲಾಗಿದೆ. ಎಐಡಿಎಸ್‌ಓ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಜನ ಹೋರಾಟ ನಡೆಯುತ್ತಿದೆ. ಈಗಾಗಲೇ ಹಿರೇಕಾಸನಕಂಡಿ, ಹೆರೆಬಗನಾಳ್, ರಾಜರಾಮ್ ಪೇಟೆ ಮತ್ತು ಮಹಮ್ಮದ್ ನಗರದ ನೂರಾರು ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಬೀದಿಗಿಳಿದು ಊರಿನ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ತೀವ್ರ ಜನವಿರೋಧದ ನಡುವೆಯೂ ಶಾಸಕರು ಹ್ಯಾಟಿಯಲ್ಲಿ ಕೆಪಿಎಸ್ ಮಾಗ್ನೆಟ್ ಶಾಲೆ ತೆರೆದು ಅದರ ಸುತ್ತಲಿನ ಶಾಲೆಗಳನ್ನು ಮುಚ್ಚುವ ನೀತಿಗೆ ಅಡಿಗಲ್ಲು ಇಡುತ್ತಿದ್ದಾರೆ.
ಜನಾಭಿಪ್ರಾಯವನ್ನು ಧಿಕ್ಕರಿಸಿರುವ ಸರ್ಕಾರದ ಈ ನಿರಂಕುಶ ಮತ್ತು ಅಪ್ರಜಾತಾಂತ್ರಿಕ ನಡೆಯನ್ನು ಎಐಡಿಎಸ್‌ಓ ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ. ಕೂಡಲೇ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕು ಮತ್ತು ಶಿಕ್ಷಕರು ಹಾಗೂ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಸಮರ್ಕ ಸೌಲಭ್ಯ ನೀಡಿ ಅಭಿವೃದ್ಧಿಪಡಿಸಬೇಕೆಂದು ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಕರು ಪಾಲಕರು ಹಾಗೂ ಶಿಕ್ಷಣ ಪ್ರೇಮಿ ಜನತೆಯ ಪರವಾಗಿ ಸರ್ಕಾರವನ್ನು ಆಗ್ರಹಿಸುತ್ತದ ಹೇಳಿಕೆ ಇವರಿಂದ, ಗಂಗರಾಜ ಅಳ್ಳಳ್ಳಿ ಜಿಲ್ಲಾ ಸಂಚಾಲಕರುಎಐಡಿಎಸ್‌ಓ ಕೊಪ್ಪಳ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 