ಆಶಾ ಕಾರ್ಯಕರ್ತೆಯರು ವೇತನ ಪಾವತಿಗೆ ಪ್ರತಿಭಟನೆ
ASHA workers protest over salary payment
ಲೋಕದರ್ಶನ ವರದಿ
ಯಲಬುರ್ಗಾ 12 : ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ವತಿಯಿಂದ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.‘ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ 4 ತಿಂಗಳುಗಳ ಕೇಂದ್ರದ ಪ್ರೋತ್ಸಾಹಧನ ಹಾಗೂ 1 ತಿಂಗಳ ಗೌರವಧನವನ್ನು ವಿತರಿಸಿ. 9 ವಿವಿಧ ಆಶಾ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸುವುದಾಗಿ ಇಲಾಖೆ ಸೂಚನೆ ಇದೆ, ಇದರಿಂದ ಪ್ರತೀ ಕಾರ್ಯಕರ್ತೆಗೆ ? 1 ಸಾವಿರದವರೆಗೆ ಪ್ರೋತ್ಸಾಹಧನ ಕಡಿತವಾಗಲಿದೆ. ಈ ಸೇವೆಗಳನ್ನು ಮುಂದುವರಿಸಲು ಸೂಕ್ತ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದರು.
‘ಮೌಲ್ಯಮಾಪನ ಹೆಸರಲ್ಲಿ ‘ಆಶಾ’ಗಳಿಗೆ ಆಗುತ್ತಿರುವ ಶೋಷಣೆ ನಿಲ್ಲಿಸಿ. ನಿವೃತ್ತಿ ಆಗಿರುವವರಿಗೆ ಇಡಿಗಂಟು ನೀಡಿರಿ. ಜನವರಿ 2025 ರಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯ ಸರ್ಕಾರದ ಗೌರವಧನ ಹಾಗೂ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಒಟ್ಟಿಗೆ ಸೇರಿಸಿ ಕನಿಷ್ಠ ಮಾಸಿಕ ? 10 ಸಾವಿರ ಗೌರವಧನ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.ಪ್ರತಿಭಟನೆಯಲ್ಲಿ ತಾಲ್ಲೂಕ ಅಧ್ಯಕ್ಷರು ಶಂಕ್ರಮ್ಮ ಹಳ್ಳಿಕೇರಿ, ಕಾರ್ಯದರ್ಶಿ ಅನ್ನಪೂರ್ಣ ಎಚ್, ಅನ್ನಪೂರ್ಣ ಬಡಿಗೇರ, ತಿಮ್ಮವ್ವ ಬಡಿಗೇರ, ಶಕುಂತಲಾ ಮಂಡಲಗೇರಿ, ವಿಜಯಲಕ್ಷ್ಮಿ ಘೋರೆ್ಡ, ವಿಜಯಲಕ್ಷ್ಮಿ ತಳವಾರ್, ಜಯಶ್ರೀ ಹಲಗೇರಿ, ಸುನಂದಾ ಜಿಪೂಜಿ, ಶೋಭಾ ಹೂಗಾರ್ , ನೂರಾಜಾನ್ ಬೇಗಂ ಸಂಕನೂರ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 