ಆಧಾರ್ ಕೇಂದ್ರ ಬಂದ್ : ವಿದ್ಯಾರ್ಥಿ, ಹಿರಿಯ ನಾಗರಿಕರಿಗೆ ಸಂಕಷ್ಟ
Aadhaar Centre Closed: Hardship for Students and Senior Citizens
ಕೊಲ್ಹಾರ 24 : ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ನೂರಾರು ಜನರು ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿಗಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಿದ್ದರೂ ಸಮರ್ಕ ಸೇವೆ ದೊರೆಯುತ್ತಿಲ್ಲ ಎಂದು ಜನಪ್ರತಿನಿಧಿಗಳು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕು ಕೇಂದ್ರದಲ್ಲಿ ಒಂದೇ ಒಂದು ಆಧಾರ್ ಸೇವಾ ಕೇಂದ್ರ ಇದ್ದು ಅದು ಕೂಡಾ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಲವು ದಿನಗಳಿಂದ ಆಧಾರ ಕೇಂದ್ರ ಮುಚ್ಚಿರುವುದು ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ.
ಆಧಾರ್ ಸೇವೆ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿ, ಸರ್ಕಾರಿ ಯೋಜನೆಗಳ ಸೌಲಭ್ಯ ಹಾಗೂ ಹಿರಿಯ ನಾಗರಿಕರ ಪಿಂಚಣಿ ಪ್ರಕ್ರಿಯೆಗಳಿಗೂ ಅಡಚಣೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದರು. ಆಧಾರ್ ಕಾರ್ಡ್ ಸಲುವಾಗಿ ಜನರು ಬೀಳಗಿ, ವಿಜಯಪುರ ಹಾಗೂ ಬಸವನ ಬಾಗೇವಾಡಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಕೊಲ್ಹಾರ ಪಟ್ಟಣದಲ್ಲಿ ಶಾಶ್ವತ ಹಾಗೂ ಪೂರ್ಣಾವಧಿ ಆಧಾರ್ ಸೇವಾ ಕೇಂದ್ರ ಆರಂಭಿಸಿ ಸಾರ್ವಜನಿಕರಿಗೆ ನಿರಂತರ ಸೇವೆ ಒದಗಿಸಬೇಕು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷ ರಮೇಶ ಬಾಲಗೊಂಡ , ಕರವೇ ತಾಲೂಕು ಅಧ್ಯಕ್ಷ ರವಿ ಗೊಳಸಂಗಿ, ಮಲ್ಲಿಕಾರ್ಜುನ ಗಣಿ, ಈರಣ್ಣ, ಸಂತೋಷ ಹಲವರು ಆಗ್ರಹಿಸಿದ್ದಾರೆ.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 