ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಜೋಡಣೆ ಕಡ್ಡಾಯ
Aadhaar linking is mandatory for the Gruha Lakshmi scheme
ಲೋಕದರ್ಶನ ವರದಿ
ಗದಗ 24: ಗೃಹಲಕ್ಷ್ಮಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಕುಟುಂಬದ ಯಜಮಾನಿಯ ಆಧಾರ್ ಜೋಡಣೆ ಹಾಗೂ ಇತರ ದಾಖಲೆಗಳ ಪರೀಶೀಲನೆಯನ್ನು ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮವನ್ನು ಸೌಜನ್ಯತಾ ಸಮಗ್ರ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಹನಾ ರಾಘವೇಂದ್ರ ಪಾಲನಕರ್ ಸ್ವಾಗತಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಅರ್ಹ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆ. ಕಳೆದ ಮೂರು ವರ್ಷಗಳಿಂದ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ.
ಆದರೆ ಕೆಲ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿಯೂ ಹಣ ಪಾವತಿಯಾಗುತ್ತಿರುವುದು ಸೇರಿದಂತೆ, ಕೆಲವು ಸಣ್ಣ ಹಣಕಾಸು ಸಂಸ್ಥೆಗಳು, ಆಭರಣ ವ್ಯಾಪಾರಿಗಳು ಹಾಗೂ ಇತರರು ಸಾಲದ ಆಮಿಷವೊಡ್ಡಿ ಫಲಾನುಭವಿಗಳನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನೈಜ ಫಲಾನುಭವಿಗಳನ್ನು ಗುರುತಿಸಲು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ರೂಪಿಸಿರುವುದು ಸ್ವಾಗತಾರ್ಹ. ಯೋಜನೆಯ ಫಲಾನುಭವಿಗಳು ಕುಟುಂಬದ ಯಜಮಾನಿಯ ಆಧಾರ್‌ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸಕ್ಕೆ ಅನುಗುಣವಾಗಿ ಫಲಾನುಭವಿಗಳ ವಿವರಗಳು ಇರಬೇಕು.
ಅಲ್ಲದೆ ಆಧಾರ್, ಬ್ಯಾಂಕ್ ಖಾತೆ, ಪಡಿತರ ಚೀಟಿ ಪರೀಶೀಲನೆ ಹಾಗೂ ಅಗತ್ಯವಿರುವ ಇತರ ದಾಖಲೆಗಳ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಅರ್ಹತೆ ಪರೀಶೀಲಿಸಿ ನೈಜ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ದೊರೆಯುವಂತೆ ಮರುಪರೀಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.
ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್ ಜೋಡಣೆಯನ್ನು ಕಡ್ಡಾಯಗೊಳಿಸುವುದರಿಂದ ಅನರ್ಹರನ್ನು ಹೊರಗಿಟ್ಟು, ರಾಜ್ಯದ ನೈಜ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಸಮರ್ಕವಾಗಿ ತಲುಪಿಸಲು ಸಾಧ್ಯವಾಗಲಿದೆ ಎಂದು ಸಹನಾ ರಾಘವೇಂದ್ರ ಪಾಲನಕರ್ ತಿಳಿಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 