ಅಭಿನವ ಶಾಂತಲಿಂಗ ಶ್ರೀಗಳ ಇಷ್ಟಲಿಂಗ ಮಹಾಪೂಜೆ
Abhinava Shantalinga's Ishtalinga Mahapuja
ಅಮ್ಮಿನಬಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಲೋಕಕಲ್ಯಾಣ ಸಂಕಲ್ಪದೊಂದಿಗೆ
ಧಾರವಾಡ, 19 : ತಾಲೂಕಿನ ಅಮ್ಮಿನಬಾವಿ ಗ್ರಾಮದ ಐತಿಹಾಸಿಕ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಲೋಕಕಲ್ಯಾಣ ಮತ್ತು ವಿಶ್ವಶಾಂತಿ ಸಂಕಲ್ಪದೊಂದಿಗೆ ಶ್ರೀಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಶುಕ್ರವಾರ (ಜುಲೈ-25ರಂದು) ಆರಂಭಗೊಳ್ಳಲಿದೆ.
ಶ್ರೀಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಒಂದು ತಿಂಗಳ ಈ ಇಷ್ಟಲಿಂಗ ಮಹಾಪೂಜಾ ಕೈಂಕರ್ಯಕ್ಕೆ ಚಾಲನೆ ನೀಡುವರು. ಆಗಷ್ಟ-23 ರವರೆಗೆ ನಿತ್ಯ ಪ್ರಾತಃಕಾಲ 8 ಗಂಟೆಗೆ ಮಠದ ಪ್ರಾಂಗಣದಲ್ಲಿ ನಡೆಯಲಿರುವ ಈ ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯಲ್ಲಿ ಸಮಸ್ತ ಸದ್ಭಕ್ತ ಸಮೂಹ ಪಾಲ್ಗೊಳ್ಳಬಹುದಾಗಿದೆ.
ನಿತ್ಯ ರುದ್ರಾಭಿಷೇಕ : ಶ್ರೀಮಠದ ಕರ್ತೃ ಗದ್ದುಗೆಗೆ ಹಾಗೂ ಕ್ಷೇತ್ರನಾಥ ಶ್ರೀವೀರಭದ್ರಸ್ವಾಮಿಗೆ ನಿತ್ಯವೂ ಪ್ರಾತಃಕಾಲದಲ್ಲಿ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿಯ ವಿಶೇಷ ಪೂಜಾ ಕೈಂಕರ್ಯಗಳು ಸೋಮಲಿಂಗಶಾಸ್ತ್ರಿ ಗುಡ್ಡದಮಠ, ಶಿವಯೋಗಿ ಹಿರೇಮಠ, ವಿನಾಯಕ ಹಿರೇಮಠ, ಈರಯ್ಯ ಹಿರೇಮಠ ಅವರಿಂದ ನಡೆಯಲಿವೆ.
ಶ್ರಾವಣ ತಪೋನುಷ್ಠಾನ : ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯ ಶ್ರಾವಣ ತಪೋನುಷ್ಠಾನದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿದಂತೆ ಅಮ್ಮಿನಬಾವಿ, ಮರೇವಾಡ, ತಿಮ್ಮಾಪೂರ, ಕರಡಿಗುಡ್ಡ, ಕವಲಗೇರಿ, ಚಂದನಮಟ್ಟಿ, ಹಾರೋಬೆಳವಡಿ ಸೇರಿದಂತೆ ಹತ್ತಿರದ ಗ್ರಾಮಗಳ ಶಿಷ್ಯ-ಸದ್ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಮಠದ ವ್ಯವಸ್ಥಾಪಕ ಶಿವಾನಂದಸ್ವಾಮಿ ಹಿರೇಮಠ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 