ಬೆಂಗಳೂರು, ಫೆ 5 : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಷರತ್ತು ಉಲ್ಲಂಘಿಸಿದ ಆರೋಪದ ಮೇಲೆ ಬಿಡದಿಯ ನಿತ್ಯಾನಂದ ಸ್ವಾಮೀಜಿ ಅವರ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಸ್ವಾಮೀಜಿಗೆ ರಾಮನಗರ ಸೆಷನ್ಸ್ ನ್ಯಾಯಾಲಯ 2010 ರಲ್ಲಿ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ದೂರುದಾರ ಕುರುಪ್ಪನ್ ಲೆನಿನ್ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿತು.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ಆರೋಪಿಯಾಗಿರುವ ನಿತ್ಯಾನಂದ ಸ್ವಾಮೀಜಿಗೆ ರಾಮನಗರ ಸೆಷನ್ಸ್ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ.
ಸ್ವಾಮೀಜಿಗೆ 2010 ರಲ್ಲಿ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಪ್ರಕರಣದ ಮೂಲ ದೂರುದಾರ ಕುರುಪ್ಪನ್ ಲೆನಿನ್ ಸಲ್ಲಿಸಿದ್ದ ಅರ್ಜಿ ಮೇಲಿನ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.
ಇದರಿಂದ ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದ ಸ್ವಾಮೀಜಿಗೆ ಬಂಧನ ಭೀತಿ ಎದುರಾಗಿದೆ. ಜೊತೆಗೆ, ಜಾಮೀನು ಪಡೆಯುವ ವೇಳೆ ನಿತ್ಯಾನಂದ ನೀಡಿದ್ದ ಶ್ಯೂರಿಟಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.
2018ರ ಜೂನ್ 5ರಂದು ನಿತ್ಯಾನಂದ ಸ್ವಾಮೀಜಿ ಕೊನೆಯ ಬಾರಿ ವಿಚಾರಣೆ ಹಾಜರಾಗಿದ್ದರು. ನಂತರ, ಜಾಮೀನು ಷರತ್ತು ಉಲ್ಲಂಘಿಸಿ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದಕ್ಕಾಗಿ ಅವಧಿ ಮುಗಿದ ಪಾಸ್‌ಪೋರ್ಟ್ ಬಳಸಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.