ವಿದ್ಯಾರ್ಥಿಗಳು ಕೌಶಲ್ಯದೊಂದಿಗೆ ಉನ್ನತ ಶಿಕ್ಷಣ ಪಡೆದಾಗ ವಿಫುಲ ಅವಕಾಶ
Abundant opportunities when students acquire higher education with skills
ಗಂಗಾವತಿ 21: ನಗರದ ಸಂಕಲ್ಪ ಎಜುಕೇಷನ್ ಟ್ರಸ್ಟ್ (ರಿ) ಅಂಗಸಂಸ್ಥೆಯಾದ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ಎನ್.ಎಸ್.ಎಸ್ ದೈನಂದಿನ ಚಟುವಟಿಕೆಗಳಿಗೆ ಚಾಲನೆಯನ್ನು ಐ.ಎಂ.ಎ ಹಾಲ್‌ನಲ್ಲಿ ನೀಡುತ್ತಾ, ಸಂಸ್ಥೆಯ ಅಧ್ಯಕ್ಷರಾದ ಹೇಮಂತರಾಜ ಕಲ್ಮಂಗಿಯವರು ಮಾತನಾಡಿ ಇಂದಿನ ಯುವ ಜನತೆ ದೇಶದ ಆಸ್ತಿಯಾಗಿದ್ದು, ವೈಯಕ್ತಿಕ-ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ನಡೆದಾಗ ಮಾತ್ರ ದೇಶ ವಿಶ್ವಮಟ್ಟದಲ್ಲಿ ಗೌರವಕ್ಕೆ ಪಾತ್ರವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ನಡೆಯುವಂತೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಎಂ.ಆರ್. ಮಂಜು ಸ್ವಾಮಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುತ್ತಾ ಉನ್ನತ ಶಿಕ್ಷಣವನ್ನು ಪಡೆದಾಗ ಮಾತ್ರ ಉದ್ಯೋಗವಕಾಶಗಳು ವಿಪುಲವಾಗಿ ದೊರೆಯುತ್ತವೆ. ಇದೇ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ನಾಗರಾಜ ಹೆಚ್. ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ವಿದ್ಯಾರ್ಥಿನಿಯರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿ ಶುಭ ಹಾರೈಸಿದರು.ಪ್ರಾಚಾರ್ಯರಾದ ಬಸವರಾಜ ಶಿರಿಗೇರಿಯವರು, ವಿದ್ಯಾರ್ಥಿನಿಯರು ಯಾವುದೇ ಕೆಲಸ ಮಾಡಬೇಕಾದರೂ ಮೊದಲು ತಮ್ಮ ಕುಟುಂಬ, ತಂದೆ-ತಾಯಿ ಬಗ್ಗೆ ಆಲೋಚಿಸಿ ಮುಂದೆ ಸಾಗಿದರೆ ಖಂಡಿತ ಸಾಧಕಿಯರಾಗುತ್ತಾರೆ ಎಂದು ಹೇಳಿ, ನೂತನ ವಿದ್ಯಾರ್ಥಿನಿಯರಿಗೆ ಸ್ವಾಗತ ಕೋರಿ ಶುಭಹಾರೈಸಿದರು.ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾದ ಕು. ಮುಸ್ಕಾನ್ ಕಂಫ್ಲಿ ಬಿ.ಕಾಂ ಹಾಗೂ ಸಹಕಾರ್ಯದರ್ಶಿಯಾದ ಕು. ಅಕ್ಷತಾ ಪಂಪಪತಿ ಎಲ್ಲಾ ವಿದ್ಯಾರ್ಥಿನಿಯರಿಗೂ ಹೂವು ನೀಡಿ, ಸ್ವಾಗತಿಸಿ ಶುಭ ಕೋರಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಸವರಾಜ, ವೈ. ಬಸವನಗೌಡ, ಸುರೇಶ, ಆಶಾ, ಉಷಾದೇವಿ, ರಮೇಶ, ಚನ್ನಬಸವ, ವಿಶ್ವನಾಥ, ಶಿವಶರಣ, ರಾಹುಲ್, ಮೇಘ, ಶರಣಮ್ಮ, ವೆಂಕಟಲಕ್ಷ್ಮಿ, ಗುರುಮೂರ್ತಿ, ಅಶೋಕ ಹೆಚ್.ಎಂ ಸೇರಿದಂತೆ ಇತರರ ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿಉಪನ್ಯಾಸಕಿಯಾದ ಸಂಪತ್‌ಕುಮಾರಿ ಅಚ್ಚುಕಟ್ಟಾಗಿ ನಿರೂಪಿಸಿದರು. ವಿದ್ಯಾ ಗಣ್ಯರನ್ನು ಸ್ವಾಗತಿಸಿದರೆ, ಶಂಕರ ವರದಾಪುರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 