2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭ
Academic Prize Distribution Ceremony for the 2025-26 Academic Year
ಲೋಕದರ್ಶನ ವರದಿ
ವಿಜಯಪುರ, ಜು.27: ನಗರದ ವಿ.ಬಿ. ದರ್ಬಾರ್ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪಾರಿತೋಷಕ ವಿತರಣಾ ಸಮಾರಂಭವನ್ನು ಜುಲೈ 25ರಂದು ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಖಜಾನೆ ಉಪನಿರ್ದೇಶಕ ಆನಂದ ವಿ. ಮುಚ್ಚಂಡಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಕ್ರಮಬದ್ಧತೆ ಹಾಗೂ ನಿರಂತರ ಪರಿಶ್ರಮದಿಂದ ತಮ್ಮ ಗುರಿ ಸಾಧಿಸಬಹುದೆಂದು ತಿಳಿಸಿದರು. ಸಾಧನೆಗೆ ಆತ್ಮವಿಶ್ವಾಸ ಮತ್ತು ಶ್ರಮವೇ ಮುಖ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಾರ್ಥ ಎನ್. ದರ್ಬಾರ್, ವಿದ್ಯಾರ್ಥಿವರ್ಧಕ ಸಂಘದ ಪದಾಧಿಕಾರಿಗಳು ಹಾಗೂ ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಶಸ್ತಿ ಪಡೆಯುವುದು ಅಂತಿಮ ಗುರಿಯಲ್ಲ; ಅದು ಇನ್ನಷ್ಟು ಜವಾಬ್ದಾರಿ ಮತ್ತು ಉನ್ನತ ಸಾಧನೆಗೆ ಪ್ರೇರಣೆಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾಲೆಯ ಉಪಪ್ರಾಚಾರ್ಯ ವಿ.ಕೆ. ಗುಜರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು, ಪೋಷಕರು, ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 