ಕೊಪ್ಪಳ: ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೇಲಾದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ಧನ ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಯಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ಪೊಲೀಸ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ವಸತಿ ಸೌಲಭ್ಯ, ಅಕ್ರಮ ಸಕ್ರಮ ಯೋಜನೆಯಡಿ ಹಕ್ಕುಪತ್ರ ವಿತರಣೆ, ಕೃಷಿ ಭೂಮಿ, ಪಹಣಿ ಹಂಚಿಕೆ ಇತ್ಯದಿ ಸಕರ್ಾರಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಪರಿಶಿಷ್ಟರಿಗೆ ಸಕರ್ಾರದ ವತಿಯಿಂದ ಕೃಷಿ ಜಮೀನುಗಳು ಮಂಜೂರು ಆಗಿದ್ದು, ಅಂತಹ ಫಲಾನುಭಿಗಳಿಗೆ ಈ ಕೂಡಲೇ ಪಹಣಿಯನ್ನು ನೀಡುವಂತೆ ಸಂಬಂಧಿಸಿದ ತಹಶೀಲ್ದಾರರು ಕ್ರಮ ವಹಿಸಬೇಕು. ದೌರ್ಜನ್ಯಕ್ಕೊಳಗಾದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಫಲಾನುಭವಿಗಳಿಗೆ ಪರಿಹಾರ ಧನವು ತ್ವರಿತಗತಿಯಲ್ಲಿ ನೀಡಬೇಕು. ದೌರ್ಜನ್ಯ ತಡೆ ಆಯೋಗವು ಭೇಟಿ ನೀಡಿದಾಗ ಈ ಕುರಿತು ಸೂಕ್ತ ವರದಿಯನ್ನು ಸಲ್ಲಿಸಬೇಕು. ಅಲ್ಲದೇ ಕಳೆದ ವರ್ಷ ಪರಿಹಾರ ಧನ ನೀಡಿದ ಫಲಾನುಭವಿಗಳ ವರದಿಯನ್ನು ಕಚೇರಿಗೆ ಸಲ್ಲಿಸಿ. ದೌರ್ಜನ್ಯ ಪ್ರಕರಣಗಳ ಪರಿಹಾರ ದೊರಕಿಸುವ ಕುರಿತು ಯಾವುದೇ ಸಮಸ್ಯೆಗಳು ಅಥವಾ ಅಡೆತಡೆ ಇದ್ದಲ್ಲಿ ಮೊಬೈಲ್ ಮೂಲಕ ಸಂದೇಶ ಕಳುಹಿಸಿ ಗಮನಕ್ಕೆ ತನ್ನಿ. ಟೆಕ್ನಾಲಜಿಯನ್ನು ವೈಯಕ್ತಿಕವಾಗಿ ಬಳಸದೇ ಸಾರ್ವಜನಿಕರ ಸೇವೆಗಾಗಿಯೂ ಸಹ ಬಳಕೆ ಮಾಡಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ರೇಣುಕಾನಂದ ಸ್ವಾಮಿ ಅವರು ಮಾತನಾಡಿ, ಪ್ರಸಕ್ತ ವರ್ಷದ ಜನೇವರಿ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೇಲೆ ಒಟ್ಟು 32 ದೌರ್ಜನ್ಯ ಪ್ರಕರಣಗಳು ನಡೆದಿವೆ. ಎಲ್ಲಾ ಪ್ರಕರಣಗಳು ಸಂಬಧಿಸಿದ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಜಿಲ್ಲೆಯ ಯಲಬುಗರ್ಾ ತಾಲೂಕಿನ ಹಗೇದಾಳ ಗ್ರಾಮದಲ್ಲಿ ಒಂದು ಕೊಲೆ ಪ್ರಕರಣವಾಗಿದ್ದು, ಮೃತರಾದ ಬಸವರಾಜ ತಂದೆ ಯಲಪ್ಪ ಬಣಕಾರ ಅವರ ತಾಯಿ ಶಾಂತವ್ವ ಬಣಕಾರ ಅವರ ಖಾತೆಗೆ ರೂ. 825000/- ಪರಿಹಾರ ಧನ ನೀಡಲಾಗಿದೆ. ಐದು ಅತ್ಯಚಾರ ಮತ್ತು ಉಳಿದ ಜಾತಿ ನಿಂದನೆ, ಹಲ್ಲೆ, ಹೊಡೆದಾಟ ಪ್ರಕರಣಗಳಾಗಿವೆ. ಈ ಪೈಕಿ 32 ಪ್ರಕರಣಗಳಲ್ಲಿ 30 ಪ್ರಕರಣಗಳಿಗೆ ಒಟ್ಟು 3275000/- ಗಳ ಪರಿಹಾರ ಧನವನ್ನು ನೀಡಲಾಗಿದೆ. ಎರಡು ಪ್ರಕರಣಗಳು ಇನ್ನೂ ಬಾಕಿ ಇವೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಪೂರ್ವದಲ್ಲಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಅನುದಾನ ಪ್ರಗತಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.