ಅಪಘಾತ: ಕರ್ತವ್ಯನಿರತ ಪತ್ರಕರ್ತ ಸಾವು
ರಾಮನಗರ, ಏ.21,ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ.ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಜಪ್ತಿ ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 