ಮಾಸ್ಕೋ, ಫೆ 13 : ರಷ್ಯಾದಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನ ಮೃತಪಟ್ಟಿದ್ದಾರೆ.
ಬುಧವಾರ ತಡರಾತ್ರಿ ಮರ್ಸಿಡೀಸ್ ಮಿನಿ ಬಸ್ ಮತ್ತು ವೋಲ್ವೋ ಟ್ರಕ್ ನಡುವೆ ಫೆಡರಲ್ ಹೆದ್ದಾರಿ ಆರ್ 23 ರಲ್ಲಿ ರುಡೋ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಅಲ್ಲಿನ ತುರ್ತು ಸಚಿವಾಲಯ ತಿಳಿಸಿದೆ.
ಈ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದೆ ಎಂದು ಹೇಳಿಕೆ ತಿಳಿಸಿದೆ.