ಬಿಲ್ಟ ಸರ್ಕಲ್ ಬಳಿ ಅಪಘಾತ: ಅಪಾಯದಿಂದ ಪಾರಾದ ನೌಕಾನೆಲೆ ಸಿಬ್ಬಂದಿ
Accident near Bilta Circle: Naval personnel escape danger
ಕಾರವಾರ 05: ನಗರದ ಬಿಲ್ಟ್ ಸರ್ಕಲ್ ಬಳಿ ಕಾರ್ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನೌಕನೆಲೆ ಸಿಬ್ಬಂದಿ ಗುನಾಜಿತ್ ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿ ಯಿಂದ ಕಾರವಾರ ನಗರ ಪ್ರವೇಶಿಸುತ್ತಿದ್ದ ಸವಣೂರು ಬಸ್ ಗೆ ಕಾರವಾರ ಪ್ರವೇಶ ದ್ವಾರ ಬಿಲ್ಟ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಕಾರ್ ಬಸ್ ನ ಮಧ್ಯಭಾಗಕ್ಕೆ ಡಿಕ್ಕಿ ಹೊಡೆದಿದೆ. ಕಾರ್ ನ ಏರ್ ಬ್ಯಾಗ್ ಓಪನ್ ಆದ ಕಾರಣ ಕಾರ್ ಚಾಲಕ ( ನೌಕಾನೆಲೆ ಸಿಬ್ಬಂದಿ) ಅಪಾಯದಿಂದ ಪಾರಾಗಿದ್ದಾರೆ.
ಕಾರ್ ನಲ್ಲಿದ್ದ ಅವರ ಮಗ ಹಾಗೂ ಕುಟುಂಬ ಸಹ ಅಪಾಯದಿಂದ ಪಾರಾಗಿದೆ. ಕಾರ್ ಮುಂಭಾಗ ನುಜ್ಜುಗೊಜ್ಜಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ,ಪ್ರಕರಣ ದಾಖಲಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 