ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಗುರುತು ಪತ್ತೆಗೆ ಮನವಿ
Accident on Dharwad-Belagavi National Highway: Appeal to establish identity
ಲೋಕದರ್ಶನ ವರದಿ
ಧಾರವಾಡ: ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಸಾಯಿ ಅರಣ್ಯ ಹೋಟೆಲ್ ಸಮೀಪ 2025ರ ಫೆಬ್ರವರಿ 15ರಂದು ರಾತ್ರಿ ಸುಮಾರು 9.00 ರಿಂದ 9.15ರ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಧಾರವಾಡದಿಂದ ಬೆಳಗಾವಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ಸುಮಾರು 40-45 ವರ್ಷದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತಲೆ, ಮುಖ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೊದಲು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ 11.35 ಗಂಟೆಗೆ ಮೃತಪಟ್ಟಿದ್ದಾರೆ.
ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 35/2026ರಡಿ ಭಾರತೀಯ ನ್ಯಾಯ ಸಂಹಿತೆ ಕಲಂ 281 ಮತ್ತು 106ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ವಯಸ್ಸು: ಸುಮಾರು 40 ರಿಂದ 45 ವರ್ಷ ಎತ್ತರ: ಸುಮಾರು 5 ಅಡಿ 6 ಇಂಚು ಮೈಬಣ್ಣ: ಸಾಧಾರಣ ಗೋಧಿ ಮೈಬಣ್ಣ
ಮುಖ: ಉದ್ದ ಮುಖ ಕೂದಲು: ತಲೆಯ ಮೇಲೆ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು ಮೀಸೆ: ಕಪ್ಪು ಮೀಸೆ ಉಡುಪು: ಬಿಳಿ ಬಣ್ಣದ ಉದ್ದತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಬರ್ಮುಡಾ ಮೃತರ ಹೆಸರು ಹಾಗೂ ವಿಳಾಸ ಇದುವರೆಗೆ ಪತ್ತೆಯಾಗಿಲ್ಲ.
ಸಾರ್ವಜನಿಕರಿಗೆ ಮೃತರ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಧಾರವಾಡ ಕಂಟ್ರೋಲ್ ರೂಂ (0836-2233201), ಡಿಎಸ್ಪಿ ಕಚೇರಿ (0836-2233202) ಅಥವಾ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ (ಮೊ. 9480804345)ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 