ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ಅರಣ್ಯ ಪ್ರದೇಶ ಗುಡ್ಡದಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ
Accidental fire breaks out late at night in a forested hill due to intense summer heat
ಲೋಕದರ್ಶನ ವರದಿ
ಜಮಖಂಡಿ 14 : ನಗರದ ಹೊರವಲಯದ ಅರಣ್ಯ ಪ್ರದೇಶ ರಾಮತೀರ್ಥದ ಗುಡ್ಡದಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂದಾಜು ಎರಡು ಎಕರೆ ಪ್ರದೇಶದಲ್ಲಿದ್ದ ಗಿಡಮರಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ಗುಡ್ಡದ ಮೇಲಿನ ಹುಲ್ಲು ಸಂಪೂರ್ಣ ಒಣಗಿ ನಿಂತಿತ್ತು. ಮಧ್ಯರಾತ್ರಿಯ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅರಣ್ಯದಾದ್ಯಂತ ವ್ಯಾಪಿಸಿದೆ. ಬೆಂಕಿಯ ಜ್ವಾಲೆಗಳು ರಭಸವಾಗಿ ಹರಡಿದ್ದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅರಣ್ಯ ಪ್ರದೇಶದ ಪಕ್ಕದಲ್ಲೇ ಕಿಡಿಗೇಡಿಗಳು ಯಾರಾದರೂ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಸಣ್ಣಪುಟ್ಟ ಗಿಡಗಳು ಸೇರಿ ಹಲವು ಮರಗಳಿಗೆ ಹಾನಿಯಾಗಿದ್ದು. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿ ಕೂಡಲೇ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನಾಹುತ ತಪ್ಪಿದಂತಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 