ಸಂಚರಿಸುತಿದ್ದ ಕಾರಿಗೆ ಆಕಸ್ಮಿಕ ಬೆಂಕಿ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಬೆಳಗಾವಿ : ಸಂಚರಿಸುತ್ತಿದ್ದ ಕಾರು ಒಂದಕ್ಕೆ ನಡುರಸ್ತೆ ಆಕಸ್ಮಿಕ ವಾಗಿ ಬೆಂಕಿ ತಗುಲಿ ಸುಣ್ಣು ಕರಕಲಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ಮಂಗಳವಾರ ಸಂಜೆ ನಡೆದಿದೆ.
ಮಂಗಳವಾರ ಸಂಜೆ 7 ಗಂಟೆಯ ಸುಮಾರಿಗೆ ಹುಕ್ಕೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಹತ್ತರಗಿಯ ಬಸ್ ನಿಲ್ದಾಣ ಎದುರಿನ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಕಂಡ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹೊರ ಓಡಿ ಬಂದಿದ್ದಾರೆ. ಇದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದಲ್ಲಿ ಇದ್ದ ರಾಜು ಹಾಗೂ ರಸೂಲ್ ಎನ್ನುವರು ಪೊಲೀಸ್ ರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ.