ಮಾರಕಾಸ್ತ್ರ ಹೊಂದಿದ ಆರೋಪಿ ಬಂಧನ: ಆಯುಧ ಜಪ್ತಿ
Accused arrested for possessing deadly weapon: Weapon seized
ಬೆಳಗಾವಿ 28; ಮಾರಕಾಸ್ತ್ರ ಹೊಂದಿದ್ದ ಆರೋಪಿಯನ್ನು ಬಂದಿಸಿ ಆತನಿಂದ ಹರಿತವಾದ ಆಯುಧವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಂಭಾಜಿ ಗಲ್ಲಿ ಮಹಾದ್ವಾರ ರೋಡ ನಿವಾಸಿ ಪ್ರಜ್ವಲ ಶಂಕರ ಕಿತ್ತವಾಡಕರ (28) ಬಂಧಿತ ಆರೋಪಿಯಾಗಿದ್ದಾನೆ.
ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಟ್ಯಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಂಶಯಾಸ್ಪದ ವ್ಯಕ್ತಿಗಳನ್ನು ಪರೀಶೀಲನೆ ಮಾಡುತ್ತಿರುವಾಗ
ದಿ. 27ರಂದು ರಾತ್ರಿ ಮಾರ್ಕೆಟ್ ಪೊಲೀಸ್ ಠಾಣೆ ಪಿಎಸ್‌ಐ ವಿಠ್ಠಲ ಹಾವನ್ನವರ ಅವರು ನಗರದ ಮಾಣಿಕಭಾಗ ಶೋ ರೂಮ್ ಎದುರುಗಡೆ ಓವರ್ ಬ್ರಿಡ್ಜ್ ಕೆಳಗಡೆ ಆರೋಪಿ ಹತ್ತಿರ ಕಾನೂನು ಬಾಹಿರವಾಗಿ ಹರಿತವಾದ ಸ್ಟೀಲ್ ಚಾಕು ಸಿಕ್ಕಿದ್ದನ್ನು ವಶಪಡಿಸಿಕೊಂಡಿದ್ದು, ಈತನ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.
ದಾಳಿ ಕೈಗೊಂಡ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪಿಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 