ಪಾಕ್ ಪರ ಘೋಷಣೆ ಕೂಗಿದ ಆರೋಪ; ಜಾಮೀನು ಅರ್ಜಿ ಹಿಂಪಡೆದ ಅಮೂಲ್ಯ

ಬೆಂಗಳೂರು, ಮೇ 26,ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆಗಳ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಅಮೂಲ್ಯ ಲಿಯೋನ್ ಅವರು ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.ಅಮೂಲ್ಯ ಲಿಯೋನ್ ಅವರು ದೇಶದ್ರೋಹಿ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.ಜೊತೆಗೆ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ಹೈಕೋರ್ಟ್ ಗೆ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.