ಪೊಲೀಸರಿಗೆ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದ ಆರೋಪಿ ತಜಗಾಂವ್ ನಲ್ಲಿ ಬಂಧನ
Accused who threatened to kill police officer, attacked, arrested in Tajgaon
ಕಾರವಾರ 22 : ಹಳಿಯಾಳದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ , ಧಮ್ಕಿ ಹಾಕಿ ಪರಾರಿಯಾಗಿದ್ದ ಆರೋಪಿ ಮಂಜುನಾಥ್ ಅಲಿಯಾಸ್ ಮಚ್ಚ ಮಂಜಾ ಮಹಾರಾಷ್ಟ್ರದ ಸಾಂಗ್ಲಿಯ ತಜಗಾಂವ್ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ಹಳಿಯಾಳ ನ್ಯಾಯಾಧೀಶರ ಎದುರು ಹಾಜರುಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳಿಯಾಳ ಮೌರ್ಯ ಬಾರ್ ಎದುರು ಪೊಲೀಸರಿಗೆ ಜೀವ ಬೆದರಿಕೆ ಹಾಕಿ, ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿ, ತಲೆಮರೆಸಿಕೊಂಡಿದ್ದ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದ, ಅವಾಚ್ಯ ಶಬ್ದದಿಂದ ಬೈದಿದ್ದ ವಿಡಿಯೋ ರಾಜ್ಯದ ಬಹುತೇಕ ಕಡೆ ವೈರಲ್ ಆಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಳಿಯಾಳ ಪಿಎಸ್ ಐ ಒಬ್ಬರನ್ನು ಅಮಾನತ್ ಮಾಡಿ, 8 ಜನ ಸಿಬ್ಬಂದಿಗಳನ್ನು ಭಟ್ಕಳ, ಮುರುಡೇಶ್ವರ ಠಾಣೆಗಳಿಗೆ ವರ್ಗಾವಣೆ ಮಾಡಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 