ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎಂ. ಪಾಟೀಲ ಶಾಲೆ ವಿದ್ಯಾರ್ಥಿಗಳ ಸಾಧನೆ
Achievement by B.M. Patil School students in the quiz competition
ವಿಜಯಪುರ 22: ದೆಹಲಿಯ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಹೆರಿಟೇಜ್ (ಇಂಟ್ಯಾಕ್) ಸಂಸ್ಥೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜಯಪುರದ ಬಿ.ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್‌ಇ) ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನಗರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ ಸಾವಳಗಿ ಮತ್ತು ದರ್ಶಕ ಕುಲಕರ್ಣಿ ತಂಡ ಪ್ರಥಮ ಸ್ಥಾನ ಗಳಿಸಿತು. ಶ್ರೀನಿಕಾ ಹಳ್ಳಿ ಮತ್ತು 7ನೇ ತರಗತಿಯ ವಿದ್ಯಾರ್ಥಿ ವಶಿಷ್ಠ ಗಣೇಶನವರ ತಂಡ ದ್ವಿತೀಯ ಸ್ಥಾನ ಪಡೆದಿದೆ.
ನಂತರ ನಡೆದ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಎಂ.ಎಸ್. ಮದಭಾವಿ ಪ್ರಶಸ್ತಿ ವಿತರಿಸಿದರು. ಸಾಹಿತಿ ಪ್ರೊ. ದೊಡ್ಡಣ ಭಜಂತ್ರಿ, ಶಿಕ್ಷಕಿ ದ್ರಾಕ್ಷಾಯಣಿ ಭಜಂತ್ರಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಚಾರ್ಯೆ ವಸುಧಾ ನಾವೇರ್ಕರ್, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 