ಸಾಧನೆಯು ಸಾಧಕನ ಸ್ವತ್ತು, ಸೋಮಾರಿಯ ಸ್ವತ್ತಲ್ಲ
Achievement is the property of the achiever
ತಾಳಿಕೋಟಿ 31: ಸಾಧನೆಯು ಸಾಧಕನ ಸ್ವತ್ತು, ಸೋಮಾರಿಯ ಸ್ವತ್ತಲ್ಲ, ಸಾಧಿಸಬೇಕೆಂಬುವ ಛಲ ಇದ್ದರೆ ಯಾವುದೇ ಸಮಸ್ಯೆ, ಸವಾಲುಗಳು ನಮ್ಮನ್ನು ತಡೆಯುವುದಿಲ್ಲ. ಸಾಧಿಸಲೇಬೇಕೆಂಬ ಹಠ ಮತ್ತು ನಿರಂತರವಾದ ಪರಿಶ್ರಮ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಕರ್ನಾಟಕ ರಾಜ್ಯ ವೀಲ್ ಚೇರ್ ಬಾಸ್ಕೆಟ್ ಬಾಲ್ ಕ್ರೀಡಾಪಟುಗಳ ಸಾಧನೆ ಉದಾರಣೆಯಾಗಿದೆ.
ನವಂಬರ್ 4 ರಿಂದ 16 ರವರೆಗೆ ಥೈಲ್ಯಾಂಡಿನ ಬ್ಯಾಂಕಾಕ್ ನಲ್ಲಿ ನಡೆಯಲಿರುವ ವೀಲ್ ಚೇರ ಬಾಸ್ಕೆಟ್ ಬಾಲ್ ಏಷಿಯಾ ಒಷಿಯನ್ ಝೇನ್ ಚಾಂಪಿಯನಶಿಪ್ 2025 ಅಂತಾರಾಷ್ಟ್ರೀಯ ಪಂದ್ಯಾವಳಿಗೆ ಕರ್ನಾಟಕ ರಾಜ್ಯದಿಂದ ನಾಲ್ಕು ಕ್ರೀಡಾಪಟುಗಳು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ತಂಡದ ನಾಯಕನಾದ ಬಸಪ್ಪ ಸುನದೋಳಿ, ಸಿದ್ದಪ್ಪ ಪಟುಗುಂದಿ ಪುರುಷರ ತಂಡದಲ್ಲಿ ಆಯ್ಕೆಯಾದರೆ, ಲಲಿತಾ ಗವಸ್, ಲಕ್ಷ್ಮಿ ರಾಯಣ್ಣವರ್ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅ. 1ರಿಂದ 10ವರೆಗೆ ನಡೆದ ರಾಷ್ಟ್ರೀಯ ವಿಲ್ ಚೇರ್ ಬಾಸ್ಕೆಟ್ ಬಾಲ್ ಚಾಂಪಿಯನ್ಶಿಪ್ 2025 ರಲ್ಲಿ ಕರ್ನಾಟಕ ಪುರುಷ ಮತ್ತು ಮಹಿಳಾ ತಂಡಗಳು ಉತ್ತಮ ಪ್ರದರ್ಶನ ನೀಡಿದ ಪುರುಷರ ತಂಡ ದ್ವಿತೀಯ ಸ್ಥಾನ ಮತ್ತು ಮಹಿಳಾ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದವು ಕರ್ನಾಟಕದಿಂದ ಈ ನಾಲ್ಕು ಕ್ರೀಡಾಪಟುಗಳು ಉತ್ತಮ ಪ್ರದರ್ಶನವನ್ನು ನೀಡಿದ್ದರು. ಇದರ ಆಧಾರದ ಮೇಲೆ ಇವರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ ಕರ್ನಾಟಕ ರಾಜ್ಯ ವಿಲ್ ಚೇರ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಕಾಂಚನ್ ಖೋತ್ ಮತ್ತು ಕಾರ್ಯದರ್ಶಿಯಾದ ಸಂಜೀವಕುಮಾರ್ ಹಜೇರಿ ಹಾಗೂ ಸಂಸ್ಥೆಯ ಎಲ್ಲ ಸದಸ್ಯರು ಅಭಿನಂದನೆಗಳೂ ಹಾಗೂ ಭಾರತ ತಂಡ ಪ್ರಥಮ ಸ್ಥಾನ ಗಳಿಸಿ ಬರಲಿ ಎಂದು ಶುಭ ಹಾರೈಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 