ಜೆ. ಎಸ್. ಎಸ್. ಪದವಿ ವಿದ್ಯಾರ್ಥಿಗಳ ಸಾಧನೆ
Achievement of J. S. S. Graduate Students
ಗೋಕಾಕ 17: ನಗರದ ಪ್ರತಿಷ್ಠಿತ ಗೋಕಾಕ ಶಿಕ್ಷಣ ಸಂಸ್ಥೆಯ ಜೆ. ಎಸ್. ಎಸ್. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.
ಸ್ವಾತಿ ಗುರುರಾಜ ನಿಡೋಣಿ ಮತ್ತು ಸುರೇಖಾ ಗಣೇಶ ಚೌಧರಿ ಇವರು ಚಾರ್ಟರ್ಡ್ ಅಕೌಂಟೆಂಡ್(ಅಂ) ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ರೂಪಾ ಬಸವರಾಜ ತಳಕಟನಾಳ, ಬಿ.ಎ. ಪದವಿ ಪರೀಕ್ಷೆಗಳಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಎರಡನೇಯ ರಾ್ಯಂಕ್ ಪಡೆದು ಸಾಧನೆ ಮಾಡಿದ್ದಾರೆ. ಕ್ರೀಡಾ ವಿಭಾಗದಲ್ಲಿ ಗಂಗಾಧರ ವ್ಹಿ. ಲಕ್ಕೆನ್ನವರ (ಕುಸ್ತಿ ಮತ್ತು 73 ಕೆ.ಜಿ. ಜುಡೋ), ಭವಾನಿ ಎಸ್. ಕೌಜಲಗಿ (ಟೇಬಲ್ ಟೆನಿಸ್) ಮತ್ತು ಗುರುನಾಥ ಬ. ಮದಲಭಾವಿ (ಯೋಗಾಸನ) ವಿಶ್ವವಿದ್ಯಾಲಯ ಬ್ಲೂ ಆಗಿ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಅಲ್ಲದೇ ಕ್ರೀಡಾ ವಿಭಾಗದಲ್ಲಿ ಗಂಗಾಧರ ವ್ಹಿ. ಲಕ್ಕೆನ್ನವರ ಇವರು ಅಖಿಲ ಭಾರತ ವಿಶ್ವವಿದ್ಯಾಲಯ ರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಜುಡೋ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರಮನ್ನರು, ನಿರ್ದೇಶಕರು, ಕಾರ್ಯದರ್ಶಿಗಳು, ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 