ಎಚ್.ಜಿ.ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಾಧನೆ
Achievement of Second PUC students of H.G. Pre-Degree College
ಲೋಕದರ್ಶನ ವರದಿ
ಸಿಂದಗಿ 09: ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 82 ರಷ್ಟು ಫಲಿತಾಂಶ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಭಾಗ್ಯಶ್ರೀ ಬಾಗೇವಾಡಿ ಶೇ 96.5 (579) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ, ಲಕ್ಷ್ಮೀ ಸಾಲೋಡಗಿ ಶೇ 96 (576) ಅಂಕ ಪಡೆದು ದ್ವಿತೀಯ ಸ್ಥಾನ, ಪೃಥ್ವಿ ಹಿರೇಮಠ ಶೇ 89.33 (536) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಅಂಬಿಕಾ ಬಿರಾದಾರ ಶೇ 94( 564) ಅಂಕ ಶಿಕ್ಷಣಶಾಸ್ತ್ರದಲ್ಲಿ 100 ಕ್ಕೆ 100 ಅಂಕ, ನೀಲಕಂಠ ಬಿರಾದಾರ ಶೇ 92.66 (556) ಅಂಕ ಪಡೆದು ದ್ವಿತೀಯ ಸ್ಥಾನ, ರೂಪಾ ಭಾಗ್ಯಜ್ಯೋತಿ ನಾಯ್ಕೋಡಿ ಶೇ 91.66
(550) ಅಂಕ ಪಡೆದು ತೃತೀಯ ಸ್ಥಾನ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಆದಿಲ್ ರಿಜವಾನ್ ಮಾಲಿಪಾಟೀಲ ಶೆಕಡಾ 88(528) ಪ್ರಥಮ ಸ್ಥಾನ ಪಡೆದಿರುತ್ತಾನೆ.
ಭಾಗ್ಯಶ್ರೀ ಬಾಗೇವಾಡಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಹಾಗೂ ವ್ಯವಹಾರ ಅಧ್ಯಯನದಲ್ಲಿ 100ಕ್ಕೆ 100 ಅಂಕ ಪಡೆದಿರುತ್ತಾರೆ.
ಪ್ರಕಾಶ ತಿಳಗೂಳ ಶಿಕ್ಷಣಶಾಸ್ತ್ರದಲ್ಲಿ 100 ಕ್ಕೆ 100 ಅಂಕ ಪಡೆದಿರುತ್ತಾರೆ.
ಒಟ್ಟು ಅತ್ಯುನ್ನತ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 103 ವಿದ್ಯಾರ್ಥಿಗಳು ಹಾಗೂ ದ್ವಿತಿಯ ಸ್ಥಾನದಲ್ಲಿ 86 ತೃತೀಯ ಸ್ಥಾನದಲ್ಲಿ 44 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಸಕರಾದ ಅಶೋಕ ಮನಗೂಳಿ ಮತ್ತು ನಿರ್ದೇಶಕ ಮಂಡಳಿ, ಪ್ರಾಚಾರ್ಯರಾದ ಎ.ಆರ್.ಹೆಗ್ಗನದೊಡ್ಡಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 