ಮೊಬೈಲ್ ಸದ್ಬಳಕೆಯಿಂದ ಸಾಧನೆ ಸಾಧ್ಯ: ಡಾ. ಮಂಜಮ್ಮ ಜೋಗತಿ
Achievements are possible through the constructive use of mobile phones: Dr. Manjamma Jogathi
ಲೋಕದರ್ಶನ ವರದಿ
ಬಳ್ಳಾರಿ 02: ನಗರದ ರಾಘವ ಕಲಾಮಂದಿರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಿದ್ದ ತಾರುಣ್ಯ ಸಿಂಧು ಯುವತಿ ಸಮ್ಮೇಳನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪದ್ಮಶ್ರೀ ಪುರಸ್ಕೃತರಾದ ಡಾ. ಮಂಜಮ್ಮ ಜೋಗತಿ, “ಭಾರತ ದೇಶದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ. ವಿದ್ಯಾರ್ಥಿನಿಯರು ಮೊಬೈಲ್ ಬಳಕೆಯಿಂದ ದೂರವಿರುವುದಕ್ಕಿಂತ ಅದರ ಸದ್ಬಳಕೆ ಮಾಡಿಕೊಳ್ಳಬೇಕು. ಮೊಬೈಲ್ ಬಳಕೆಯ ಸಮಯವನ್ನು ಪುಸ್ತಕ ಓದುವ ಕಡೆಗೆ ಹರಿಸಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ,” ಎಂದರು.
ತಾವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು, ಪ್ರತಿದಿನ 3ಹಿ4 ಪತ್ರಿಕೆಗಳನ್ನು ಓದುತ್ತಿದ್ದ ಪರಿಣಾಮ ಇಂದು ಎಲ್ಲರ ಮುಂದೆ ಮಾತನಾಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
“ಸಮಾಜದಲ್ಲಿ ಯಾರು ಯಾರನ್ನು ಗುರುತಿಸುತ್ತಾರೆ ಎಂಬುದಕ್ಕಿಂತ ನಮ್ಮ ಸಾಧನೆಯೇ ನಮ್ಮನ್ನು ಗುರುತಿಸುವಂತೆ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಾಧನೆಯತ್ತ ಗಮನ ಹರಿಸಬೇಕು,” ಎಂದು ಕರೆ ನೀಡಿದರು.
ಕಾರ್ಯಕ್ರಮದ ಅತಿಥಿಯಾಗಿ ಮಾತನಾಡಿದ ಡಾ. ಭವ್ಯಶ್ರೀ ಶೇಖರ್, ಇಂದಿನ ಯುವಜನತೆ ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣದ ಬೆಳವಣಿಗೆಗೆ ಬಳಸಿಕೊಳ್ಳಬೇಕು. ವಿದ್ಯಾರ್ಥಿನಿಯರು ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು. ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಸುಮಂಗಲಾ, ವಿದ್ಯಾರ್ಥಿನಿ ಪ್ರಮುಖ್ ಸಂಜನಾ ಪಾಟೀಲ್, ವಿಭಾಗ ಸಂಚಾಲಕ ದೀಲೀಪ್ ಕುಮಾರ್, ಲೀಲಾವತಿ, ಸಚಿನ್ ಕುಳಗೇರಿ, ಸಂದೀಪ್ ಅರಳಗುಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭವ್ಯ ಶೋಭಾಯಾತ್ರೆ : ಸಮ್ಮೇಳನದ ಅಂಗವಾಗಿ ನಗರದ ಮೋತಿ ಸರ್ಕಲ್‌ನಿಂದ ರಾಯಲ್ ಸರ್ಕಲ್ ಮೂಲಕ ರಾಘವ ಕಲಾಮಂದಿರದವರೆಗೆ ನೂರಾರು ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಭಾರತ ಮಾತಾ ಕೀ ಜೈ ಹಾಗೂ ವಂದೇ ಮಾತರಂ ಘೋಷಣೆಗಳೊಂದಿಗೆ ಶೋಭಾಯಾತ್ರೆ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 