ಅನ್ವೇಷಾ ಸ್ಪರ್ಧೆಯಲ್ಲಿ ಜೆ.ಎಸ್.ಎಸ್ ಸಿ.ಬಿ.ಎಸ್.ಇ ಮಕ್ಕಳ ಸಾಧನೆ
Achievements of JSS CBSE children in the research competition
ಧಾರವಾಡ 02: ಜೆ.ಎಸ್.ಎಸ್. ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳು ಪಿ.ಸಿ.ಜಾಬಿನ್ ಕಾಲೇಜಿನಲ್ಲಿ ನಡೆದ ಅಂತರ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಭಾರತೀಯ ಸಂಸ್ಕೃತಿಯ ಅನಾವರಣದ ಅನ್ವೇಷಾ 5.0 ಸ್ಪರ್ಧೆಯಲ್ಲಿ ಭಾಗವಹಿಸಿ, ಫ್ಯಾಷನ್ ಷೋ ಸ್ಪರ್ಧೆಯಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು, ಗ್ರೂಪ್ ಡಾನ್ಸ ಸ್ಪರ್ಧೆಯಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಮತ್ತು ಕ್ವಿಜ್ ಪಂದ್ಯವಳಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿತಂದಂತಹ ಮಕ್ಕಳನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳದ ಡಾಽಽ ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ, ಎಸ್.ಕೆ ಡಿ.ಆರ್.ಡಿ.ಪಿಯ ನಿರ್ದೇಶಕರಾದ ಪ್ರದೀಪ ಶೆಟ್ಟಿ ಹಾಗೂ ಶಾಲಾ ಪ್ರಾಂಶುಪಾಲರಾದ ಸಾಧನಾಎಸ್ ಅಭಿನಂದಿಸಿ ಶುಭ ಹಾರೈಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 