ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಎಸ್.ಎಸ್. ಕೂಡಲಮಠ ಶಾಲೆಯ ವಿದ್ಯಾರ್ಥಿಗಳ ಸಾಧನೆ
Achievements of S.S. Koodalamatha School students in the State Award examination
ಲಕ್ಷ್ಮೇಶ್ವರ 13: ಸಮೀಪದ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡಲಮಠ ಮಾಧ್ಯಮಿಕ ಶಾಲೆಯ 20 ಸ್ಕೌಟ್ಸ್ ಹಾಗೂ 6 ಗೈಡ್ಸ್ ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಭವನದಲ್ಲಿ ನಡೆದ ರಾಜ್ಯ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು. ಶಾಲೆಯ ವಿದ್ಯಾರ್ಥಿ ಕುಮಾರ ಮಲ್ಲಿಕಾರ್ಜುನ ಪಿ. ಕಾಳಪ್ಪನವರ ಅವರು ಗದಗ ಜಿಲ್ಲೆಯ ಪ್ರತಿನಿಧಿಯಾಗಿ ಪ್ರಶಸ್ತಿ ಸ್ವೀಕರಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ರಾಜ್ಯ ಪುರಸ್ಕಾರ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಕೆ.ಆರ್. ಲಮಾಣಿ ಹಾಗೂ ಶ್ರೀಮತಿ ಪಿ.ಸಿ. ಹಿರೇಮಠ ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಬಳಿಗಾರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 