ಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ದಿ ಫೀನಿಕ್ಸ್‌ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ದಿ ಫೀನಿಕ್ಸ್‌ ಇಂಟರ್ನ್ಯಾಷನಲ್ ಶಾಲೆ ವಿದ್ಯಾರ್ಥಿಗಳ ಸಾಧನೆ  Achievements of The Phoenix International School students at the state-level sports meet


ಲಕ್ಷ್ಮೇಶ್ವರ, ಸೆ. 4: ದಿ ಫೀನಿಕ್ಸ್‌ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.  ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ಪ್ರಶಂಸನೀಯ ಪ್ರದರ್ಶನ ನೀಡಿದ್ದಾರೆ. ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ ಮೆಣಸಾಗಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮಂಗಳಾ ಹಸರಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಕಾಂತೇಶ್ ಮುದುಗಲ್, ಕ್ರೀಡಾ ಸಂಯೋಜಕಿ ಶೈಲಾ ಬಿಂಕದಕಟ್ಟಿ ಹಾಗೂ ತರಬೇತುದಾರರಾದ ಮಂಜುನಾಥ ಜಾದರ್ ಮತ್ತು ತೇಜರಾಜ ಅಂಬಿಗೇರ್ ಸೇರಿದಂತೆ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಮಾರ್ಗದರ್ಶನ ಕಾರಣವಾಗಿದೆ.  ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತಗಳಲ್ಲಿಯೂ ಹೆಚ್ಚಿನ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.