ಬ.ಸಾಲವಾಡಗಿ ಸರ್ಕಾರಿ ಪ್ರೌಢಶಾಲೆ ಮಕ್ಕಳ ಸಾಧನೆ
Achievements of children of B.Salvadagi Government High School
ತಾಳಿಕೋಟಿ 27: ತಾಲೂಕಿನ ಬ.ಸಾಲವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆ ಫಲಿತಾಂಶ ಶೇ.96.62 ರಷ್ಟಾಗಿದೆ. ಕುಮಾರಿ ಭೂಮಿಕಾ ಸತ್ಯಂಪೇಟ 613 (98.08ಅ) ಶಾಲೆಗೆ ಪ್ರಥಮ. ಕುಮಾರ ರಾಮನಗೌಡ ಕೋಳೂರು 605 (96.80ಅ) ದ್ವಿತೀಯ ಹಾಗೂ ಕುಮಾರಿ ಪಲ್ಲವಿ ಸಜ್ಜನ 602 (96.32ಅ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 51 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸ್ ಕ್ಲಾಸ್ ಆಗಿದ್ದಾರೆ. ಒಟ್ಟು 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇವರಲ್ಲಿ 88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 