ರಾಚವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸರ್ಕಾರಿ ಕಾಲೇಜುಗಳ ಸಾಧನೆ
Achievements of government colleges in the Rani channamma Athletics Games
ಲೋಕದರ್ಶನ ವರದಿ
ವಿಜಯಪುರ 05: ಇತ್ತೀಚೆಗೆ ದಿನಾಂಕ: ನವ್ಹಂಬರ 30 ರಿಂದ ಡಿಸೆಂಬರ 2 ರವರೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜರುಗಿದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ-1 ನೇಯ ಸೆಮೆಸ್ಟರ್ ವ್ಯಾಸಂಗ ಮಾಡುತ್ತಿರುವ ಅಮೀರ ತಾಂಬೋಳಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.
ಅದೇ ರೀತಿ ಮಲ್ಲಮ್ಮ ತೋಳಮಟ್ಟಿ ಇವಳು 1500 ಮೀಟರ್ ಹಾಗೂ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಾಲೇಜಿನ ಮೆಚ್ಚುಗೆ ಪಾತ್ರರಾಗಿದ್ದಾಳೆ.
ಈ ಇಬ್ಬರು ಕ್ರೀಡಾಪಟುಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಬಸನಗೌಡ. ಆರ್. ಪಾಟೀಲ, ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ ಸಂಗಮೇಶ ಗುರವ, ಕ್ರೀಡಾ ಸಮೀತಿಯ ಸದಸ್ಯರಾದ ಡಾ. ಚಿದಾನಂದ ಆನೂರ, ಪ್ರೊ. ಎಂ.ಎಸ್, ಖೊದ್ನಾಪೂರ, ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.
ಅಮೀರ ತಾಂಬೋಳಿ ಕ್ರೀಡಾಪಟು ಅಭಿಪ್ರಾಯ:
ಪ್ರಾಂಶುಪಾಲರ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಪ್ರೇರಣೆ ಮತ್ತು ಹೆಚ್ಚಿನ ಪ್ರೋತ್ಸಾಹವೇ ನಮ್ಮ ಸಾಧನೆಗೆ ಸ್ಪೂರ್ತಿ. ಈ ಸರ್ಕಾರಿ ಕಾಲೇಜು ನಮ್ಮಂತಹ ಅದೇಷ್ಟೋ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಸಾಧನೆ ತೋರಲು ಪೂರಕವಾದ ಸೌಲಭ್ಯಗಳನ್ನು ಒದಗಿಸುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 