ಸಾಧಕ ರಾಜೇಶ್ ಕನ್ನೂರುಗೆ ಸನ್ಮಾನ
Achiever Rajesh Kannuru Felicitated
ವಿಜಯಪುರ, 27: ಅಂಗವಿಕಲತೆಯನ್ನು ಮೆಟ್ಟಿ ನಿಂತು ಭಾರತೀಯ ದೈಹಿಕ ಅಂಗವಿಕಲರ (ಪಿಡಿ) ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ದೇಶಕ್ಕೆ ಕೀರ್ತಿ ತಂದಿರುವ ವಿಜಯಪುರದ ರಾಜೇಶ್ ಕನ್ನೂರು ಅವರನ್ನು ಜಿಲ್ಲಾ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ರಾಜೇಶ್ ಕನ್ನೂರು ಅವರ ಪರಿಶ್ರಮ, ಕ್ರೀಡಾ ಪ್ರೇಮ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆಯನ್ನು ಗುರುತಿಸಿ ಮಂಡಳಿಯ ಪದಾಧಿಕಾರಿಗಳು ಶಾಲು-ಹೂಮಾಲೆ ಹಾಕಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಸಿದರು.
ದಲಿತ ಸ್ವರಾಜ್ಯ ಸೇನೆ-ಕರ್ನಾಟಕ ಸಂಘಟನೆಯ ಅಧ್ಯಕ್ಷ ಗೌಡಪ್ಪ ಬಡಿಗೇರ ಮಾತನಾಡಿ, ಕೊಳಗೇರಿ ನಿವಾಸಿಗಳ ಕುಟುಂಬದಿಂದ ಬಂದ ರಾಜೇಶ್ ಕನ್ನೂರು ಕಠಿಣ ಸವಾಲುಗಳ ನಡುವೆಯೂ ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ ಎಂದರು.
ಕೇವಲ 65 ಎಸೆತಗಳಲ್ಲಿ 119 ರನ್ ಗಳಿಸಿ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಶತಕ ಬಾರಿಸುವ ಮೂಲಕ ಭಾರತದ ಮೊದಲ ಪಿಡಿ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರಾಜೇಶ್, ಡಿಸಿಸಿ ನೀಡುವ ‘ವರ್ಷದ ಆಟಗಾರ’ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಪ್ರಮುಖ ಟಿ-20 ಕ್ರಿಕೆಟ್ ಟೂರ್ನಿಗಳಲ್ಲಿ ಭಾರತವನ್ನು ಪ್ರತಿನಿಧಿಸುವ 17 ಆಟಗಾರರ ತಂಡದಲ್ಲಿ ಸ್ಥಾನ ಪಡೆದಿರುವುದು ವಿಜಯಪುರ ಜಿಲ್ಲೆ ಹಾಗೂ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಇಂತಹ ಪ್ರತಿಭೆಗಳಿಗೆ ಸೂಕ್ತ ವಸತಿ, ವಿದ್ಯುತ್ ಸಂಪರ್ಕ ಹಾಗೂ ಆರ್ಥಿಕ ನೆರವು ಒದಗಿಸುವ ಮೂಲಕ ಸರ್ಕಾರ ಮತ್ತು ಕ್ರೀಡಾಭಿಮಾನಿಗಳು ಪ್ರೋತ್ಸಾಹಿಸಬೇಕು ಎಂದು ಗೌಡಪ್ಪ ಬಡಿಗೇರ ಹೇಳಿದರು.
ಈ ಸಂದರ್ಭದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಸಿಬ್ಬಂದಿ ಗುರುನಾಥ ಬೆಂಕಿ, ಸಂಘಟನೆಯ ಸಂಚಾಲಕ ಅಮೃತ ಮಾವಿನಹಳ್ಳಿ, ಸುನಿಲ್ ಕುಮಾರ್ ಕಳಸರೆಡ್ಡಿ, ಪರಶುರಾಮ ಕರವಿನಾಳ, ಅಕ್ಷಯ ಕುಮಾರ್ ಅಜಮನಿ, ಎಂ.ಆರ್. ದೊಡಮನಿ, ಆರೂಢಸ್ವಾಮಿ ಕಬಾಡೆ, ಹುಲಗೇಪ್ಪ ಹಂದ್ರಾಳ, ಗುರುಪಾದ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 