ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಸಗುವ ಕೃತ್ಯ ಖಂಡನೀಯ: ಭರತ್ ಆಗ್ರಹ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಸಗುವ ಕೃತ್ಯ ಖಂಡನೀಯ: ಭರತ್ ಆಗ್ರಹ Act hurting religious sentiments is condemnable: Bharat demands action

ಶಿಗ್ಗಾವಿ  22: ಪಟ್ಟಣದ ಶ್ರೀ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವ ರೀತಿಯಲ್ಲಿ ಅನ್ಯ ಕೋಮಿನ ವ್ಯಕ್ತಿ ನಡೆದುಕೊಂಡಿರುವುದು ಖಂಡನೀಯ ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಒತ್ತಾಯಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿಯೊಂದು ಧರ್ಮದಲ್ಲೂ ನಂಬಿಕೆ ಹಾಗೂ ಪವಿತ್ರ ಸ್ಥಳಗಳಿದ್ದು, ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಹ ಕೃತ್ಯಗಳು ಎಸಗುವುದು ಸಂಪೂರ್ಣ ಖಂಡನೀಯ. ಆಗಸ್ಟ್‌ 20, 2026ರಂದು ಶಿಗ್ಗಾವಿಯ ಶ್ರೀ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದಿದ್ದು  ಈ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಕಳೆದ 17 ವರ್ಷಗಳ ಕಾಲ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಶಾಸಕರಾಗಿದ್ದ ಅವಧಿಯಲ್ಲಿ ಶಿಗ್ಗಾವಿಯಲ್ಲಿ ಇಂತಹ ಅಹಿತಕರ ಘಟನೆಗಳು ನಡೆದ ಉದಾಹರಣೆಗಳಿರಲಿಲ್ಲ. ಎಲ್ಲ ಸಮುದಾಯದವರು ಸೌಹಾರ್ದತೆಯಿಂದ ಬದುಕುವ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಇಂತಹ ಘಟನೆಗಳು ತಾಲ್ಲೂಕಿಗೆ ಕಳಂಕ ತಂದಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.