ಉಗ್ರರ ವಿರುದ್ಧ ಕಾರ್ಯಾಚರಣೆ : 20 ತಾಲಿಬಾನಿಗಳು ಬಲಿ
ಕಾಬೂಲ್, ಮೇ 20,ಅಫ್ಘಾನಿಸ್ತಾನದ ದಕ್ಷಿಣ ಹೆಲ್ಮಂಡ್ ಪ್ರಾಂತ್ಯ,ಉತ್ತರ ಬಾಲ್ಖ್ ಮತ್ತು ಜವ್ಜನ್ ಪ್ರಾಂತ್ಯಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ 20 ಕ್ಕೂ ಹೆಚ್ಚು ತಾಲಿಬಾನ್ ಉಗ್ರರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಅಫಘಾನ್ ರಾಷ್ಟ್ರೀಯ ಸೇನೆ ಬುಧವಾರ ತಿಳಿಸಿದೆ. "ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದ ಸಾಂಗಿನ್ ಜಿಲ್ಲೆಯಲ್ಲಿ ಅಫಘಾನ್ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ ನಾಲ್ಕು ತಾಲಿಬಾನ್ ದಂಗೆಕೋರರು ಸಾವನ್ನಪ್ಪಿ ಐದು ಮಂದಿ ಗಾಯಗೊಂಡಿದ್ದಾರೆ" ಎಂದು 215 ನೇ ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬಾಲ್ಕ್ ಮತ್ತು ಜಾವ್ಜಾನ್‌ನಲ್ಲಿ ನಡೆದ "ಕಾರ್ಯಾಚರಣೆ ಮತ್ತು ವೈಮಾನಿಕ ದಾಳಿಯಲ್ಲಿ" 17 ತಾಲಿಬಾನ್ ದಂಗೆಕೋರರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಶಾಹೀನ್ ಕಾರ್ಪ್ಸ್ ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 