ಕಳಪೆ ಕಾಮಗಾರಿಗಳು ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಸುನೀಲ್ಕುಮಾರ್

ಕೊಪ್ಪಳ: ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಪಿ.ಆರ್.ಇ.ಡಿ, ಕೆ.ಆರ್.ಐ.ಡಿ.ಎಲ್ ಹಾಗೂ ಇತರ ಇಲಾಖೆಯ ಇಂಜಿನಿಯರಗಳು ಕಾಮಗಾರಿಗಳನ್ನು ಕಳಪೆ ಮಟ್ಟದಲ್ಲಿ ಮಾಡುತ್ತಿರುವ ದೂರುಗಳು ಬರುತ್ತಿದ್ದು, ಮುಂದೆ ಇಂತಹ ದೂರುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಇಂಜಿನಿಯರಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು (ನ. 31) ಏರ್ಪಡಿಸಲಾಗಿದ್ದ ಅನುಸೂಚಿತ ಜಾತಿಗಳ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಂಬಂಧಪಟ್ಟ ಅಧಿನಿಯಮ-2013 ರನ್ವಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು. ಜಿಲ್ಲೆಯಲ್ಲಿರುವ ಬಾಲಕಿಯರ ವಸತಿ ನಿಲಯ, ಅಂಬೇಡ್ಕರ್ ಭವನ ಕಟ್ಟಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆದಷ್ಟು ಬೇಗ ಟೆಂಡರ್ಗಳನ್ನು ಕರೆದು ಕಾಮಗಾರಿಗಳಿಗೆ ಚಾಲನೆ ನೀಡಬೇಕು. ನಿಮರ್ಾಣ ಹಂತದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ನಿರ್ಧಿಷ್ಟ ಕಾಮಗಾರಿಗೆ ನೀಡಿದ ಅನುದಾನವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಒಂದುವೇಳೆ ಆ ಕಾಮಗಾರಿಗೆ ಯಾವುದೇ ಅಡೆತಡೆಗಳು ಕಂಡು ಬಂದಲ್ಲಿ ಮತ್ತು ಕಾಮಗಾರಿ ಸ್ಥಗಿತಗೊಂಡಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಹೇಳಿದರು.

ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಬಹಳ ಹಿಂದುಳಿದಿದೆ. ಕೆ.ಕೆ.ಆರ್.ಡಿ.ಬಿ, ಪಿ. ಡಬ್ಲ್ಯೂ.ಡಿ, ನಿಮರ್ಿತಿ ಕೇಂದ್ರ, ಪಿ.ಆರ್.ಇ.ಡಿ, ಕೆ.ಆರ್.ಐ.ಡಿ.ಎಲ್ ಹಾಗೂ ಇತರ ಇಲಾಖೆಯ ಕಾಮಗಾರಿಗಳು ವಿಳಂಬವಾಗುತ್ತಿರುವ ಕುರಿತು ಇಂಜಿನಿಯರಗಳಿಗೆ ಪ್ರಶ್ನಿಸಿದ ಅವರು, ಕೆ.ಆರ್.ಐ.ಡಿ.ಎಲ್ ಮತ್ತು ನಿಮರ್ಿತಿ ಕೇಂದ್ರದಡಿ ಬರುವ ಯಾವುದೇ ಇಲಾಖೆಯ ಕಾಮಗಾರಿ ವಿಳಂಬವಾದರೆ ಅಥವಾ ಆರಂಭವಾಗದೆ, ಕಳಪೆ ಮಟ್ಟದಿಂದ ಕೂಡಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಕುರಿತು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಪಿ.ಡಬ್ಲ್ಯೂ.ಡಿ ಅಡಿಯಲ್ಲಿ ನಿಮರ್ಾಣವಾಗುತ್ತಿರುವ ಗಿಣಿಗೇರಾ ಮತ್ತು ಆನೆಗುಂದಿ ವ್ಯಾಪ್ತಿಯ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗೂ ಅವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳುವ ಮೂಲಕ  ಸುಸಜ್ಜಿತ ರಸ್ತೆ ನಿಮರ್ಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಪಿ ಮಾರುತಿ, ಸಮಾಜ ಕಲ್ಯಾಣ ಇಲಾಖೆ (ಪ್ರಭಾರ), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿದರ್ೇಶಕ ಈರಪ್ಪ ಆಶಾಪುರ, ಜಂಟಿ ಕೃಷಿ ನಿದರ್ೇಶಕಿ ಶಬಾನಾ ಶೇಖ್, ಜಿಲ್ಲಾ ಪಂಚಾಯತ್ನ ರಂಗಯ್ಯ ಬಡಿಗೇರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಸಿದ್ಧರಾಮೇಶ್ವರ ಸೇರಿದಂತೆ ಇತರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.