ಕೊಪ್ಪಳ 12: ಕನಕಗಿರಿ ಉತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನರ್ಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದರು.
ಕನಕಗಿರಿ ಉತ್ಸವವ ಆಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಐತಿಹಾಸಿಕ ಸುಪ್ರಸಿದ್ಧ ಪುರಾತನ ಸ್ಮಾರಕಗಳನ್ನು ರಕ್ಷೀಸುವ ಹಾಗೂ ಅಭಿವೃದ್ಧಿ ಪಡಿಸುವ ಮತ್ತು ನಮ್ಮ ಸಂಸ್ಕೃತಿ, ಪರಂಪರೆಯನ್ನು ಯುವ ಪಿಳಿಗೆಗೆ ತಿಳಿಸುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ. ಈ ದಿಶೇಯಲ್ಲಿ ಕೊಪ್ಪಳ ಜಿಲ್ಲೆಯ ಆನೆಗೊಂದಿ ಹಾಗೂ ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವಗಳನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಆನೆಗೊಂದಿ ಉತ್ಸವ-2020ರ ಮಾದರಿಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಕನಕಗಿರಿಯ ಉತ್ಸವವನ್ನು ಸಹ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಉತ್ಸವ ಆಚರಣೆಗೆ ಬೇಕಾಗುವ ಅನುದಾನದ ಅಂದಾಜು ಪಟ್ಟಿಯನ್ನು ತಯರಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಅಲ್ಲದೇ ಈ ಉತ್ಸವವನ್ನು ಯಾವ ಸಮಯದಲ್ಲಿ ಆಚರಿಸುವುದು ಸೂಕ್ತ ಎಂದರು.
ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಮಾತನಡಿ, ಉತ್ಸವವನ್ನು ಕನಕಗಿರಿ ಜಾತ್ರೆಯ ಪೂರ್ವ ಅಥವಾ ನಂತರದಲ್ಲಿ ಆಚರಣೆ ಮಾಡಬೇಕು ಎಂದರು.
ಸಂಸದ ಕರಡಿ ಸಂಗಣ್ಣ ಅವರು ಮಾತನಾಡಿ, ಕನಕಗಿರಿ ಉತ್ಸವವನ್ನು ಜಾತ್ರಾ ಪೂರ್ವದಲ್ಲಿ ಆಚರಿಸಬೇಕೆಂದರೆ ಫೆಬ್ರವರಿ ಮಾಹೆಯಲ್ಲಿ ಆಚರಿಸಬೇಕಾಗುತ್ತದೆ. ಇತ್ತೀಚೆಗೆ ಆನೆಗೊಂದಿ ಉತ್ಸವ ಅದ್ದೂರಿಯಾಗಿ ನಡೆದಿದ್ದು, ಕನಕಗಿರಿ ಜಾತ್ರೆಯು ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಜಾತ್ರೆಯ ನಂತರ ಉತ್ಸವ ಆಚರಿಸುವುದು ಸೂಕ್ತ ಇದರಿಂದ ಹೆಚ್ಚಿನ ಕಾಲಾವಕಾಶ ಸಿಗುವುದಲ್ಲದೇ ಉತ್ಸವ ಅದ್ದೂರಿಯಾಗಿ ಜರುಗಲು ಅನುಕೂಲವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, ಕನಕಗಿರಿ ಉತ್ಸವಕ್ಕೆ ಅಂದಾಜು 1 ರಿಂದ 1.5 ಕೋಟಿ ರೂ. ಅನುದಾನ ಬೇಕಾಗುವುದು. ಈ ಕುರಿತು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬಂದ ಸಲಹೆಗಳನ್ವಯ ಕನಕಗಿರಿ ಉತ್ಸವವನ್ನು ಮಾರ್ಚ್ ಮಾಹೆಯ ಕೊನೆಯಲ್ಲಿ ಅಥವಾ ಎಪ್ರೀಲ್ ಮೊದಲ ವಾರದಲ್ಲಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಕೃಷ್ಣ ಉಕ್ಕುಂದ, ಆಹಾರ ಇಲಾಖೆ ಉಪನಿರ್ದೇಶಕ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ್ ಕೆ.ರಂಗಣ್ಣನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.