ಪ್ರತ್ಯೇಕ ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ : ಸಚಿವ ಕೃಷ್ಣಬೈರೇಗೌಡ
Action for distribution of separate caste certificates: Minister Krishnabyre Gowda
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳ ಸಿವಿಲ್ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳಲ್ಲಿ ರೂ.1 ಕೋಟಿವರೆಗೆ ಮೀಸಲಾತಿ ಹಾಗೂ ಉದ್ಯಮಿಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.6 ರಂತೆ ಬಡ್ಡಿದರದಲ್ಲಿ ರೂ.10 ಕೋಟಿಗಳ ವರೆಗಿನ ಸಾಲ ನೀಡುವ ಮತ್ತು ಸಹಾಯಧನ ಕಲ್ಪಿಸುವ ಯೋಜನೆ ಪಡೆಯಲು ನಮೂನೆ-ಐ ನಲ್ಲಿ ಜಾತಿ ಪ್ರಮಾಣ ಪತ್ರವನ್ನು ವಿತರಿಸಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿಕೊಡಲು 2 ರಾಷ್ಟ್ರೀಯ ಮಾಹಿತಿ ಕೇಂದ್ರಕ್ಕೆ ಕೋರಲಾಗಿದ್ದು, ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು 2ಎ ಸಮುದಾಯಗಳಿಗೆ ಸೇರಿದವರಿಗೆ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ರೂ.1 ಕೋಟಿಯವರೆಗೆ ಮೀಸಲಾತಿ ತಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದ್ದು, ಕಂದಾಯ ಇಲಾಖೆಯಿಂದ ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡಬೇಕಾಗಿದೆ. ಇದರ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಡಾ.ಯತೀಂದ್ರ ಎಸ್ ಅವರು ನಿಯಮ 72ರ ಮೇರೆಗೆ ಕೋರಿದ ಗಮನ ಸೆಳೆಯುವ ಸೂಚನೆಗೆ ಪರಿಷತ್ತಿನಲ್ಲಿ ಡಿ.16ರಂದು ಸಚಿವರು ಲಿಖಿತ ಉತ್ತರ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 