ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಪುನಶ್ಚೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ
Action for revival of Karnataka Handloom Development Corporation said Minister Sivananda Patil
ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಾರ್ವಜನಿಕ ಉದ್ದಿಮೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವನ್ನು ಕರ್ನಾಟಕ ಜವಳಿ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಜೊತೆಗೆ ವಿಲೀನಗೊಳಿಸಲು ನಿರ್ಣಯಿಸಲಾಗಿದೆ. ಈ ವಿಲೀನ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿದ್ದು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಜೊತೆಗೆ ವಿಲೀನಗೊಳಿಸುವ ಸಂದರ್ಭದಲ್ಲಿ ಕೈಮಗ್ಗ ನೇಕಾರರ ಹಿತವನ್ನು ಕಾಯ್ದುಕೊಳ್ಳಲು ನಾನಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಲೀನ ಪ್ರಕ್ರಿಯೆ ಆದ ನಂತರವು ಮುಂದುವರೆಸಲಾಗುತ್ತದೆ.
ಕೆ.ಹೆಚ್.ಡಿ.ಸಿ. ನಿಗಮದ ನೇಕಾರರಿಗೆ ನಿರಂತರ ನೂಲು ಪೂರೈಕೆ ಮಾಡಿ ಉದ್ಯೋಗ ಒದಗಿಸುವುದು., ಕೆ.ಹೆಚ್.ಡಿ.ಸಿ. ನಿಗಮದ ನೇಕಾರರಿಗೆ ಪರಿವರ್ತನಾ ಶುಲ್ಕ ಪಾವತಿಸುವುದು, ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲು ಇ-ಕಾಮರ್ಸ್ ವೇದಿಕೆ ಕಲ್ಪಿಸುವುದು ಮತ್ತು ಬೆಂಗಳೂರು ಅಂತರಾಷ್ಟ್ರೀಯ ನಿಲ್ದಾಣದ ಆವರಣದಲ್ಲಿ ಕೈಮಗ್ಗ ಮಾರಾಟ ಮಳಿಗೆಯ ಕಲಾಲೋಕ ಸ್ಥಾಪನೆ ಮೂಲಕ ಮಾರುಕಟ್ಟೆ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 