ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಎಸ್.ಮಧುಬಂಗಾರಪ್ಪ
Action for school infrastructure
ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11: ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 