ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಕ್ರಮ : ಸತೀಶ್ ಜಾರಕಿಹೊಳಿ
ಬೆಳಗಾವಿ: 06 : ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.
ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ (ಜ.6) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಪ್ರಾಣಿಸಂಗ್ರಹಾಲಯಕ್ಕೆ ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ತರಿಸುವ ಪ್ರಯತ್ನ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಇತರೆ ಪ್ರಾಣಿಗಳನ್ನು ತರಿಸಲಾಗುವುದು ಎಂದು ತಿಳಿಸಿದರು.
ಉದ್ಯಾನ ಮತ್ತು ಪ್ರಾಣಿ ಸಂಗ್ರಹಾಲಯಕ್ಕೆ ಕುಡಿಯುವ ನೀರು ಪೂರೈಸಲು ಮಾರ್ಕಂಡೇಯ ನದಿಯಿಂದ ನೀರು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.ಸಂಸದ ಸುರೇಶ್ ಅಂಗಡಿ, ಮಹಾಪೌರ ಬಸಪ್ಪ ಚಿಕ್ಕಲದಿನ್ನಿ ಮತ್ತಿತರರು ಭೂಮಿಪೂಜೆ ನೆರವೇರಿಸಿದರು.
ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತರಾದ ಶಶಿಧರ್ ಕುರೇರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ.ಕರುಣಾಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 