ಬಾಡ ಹಾಗೂ ಗುಡ್ಡದ ಚನ್ನಾಪುರ ರೂ.34 ಕೋಟಿ ವೆಚ್ಚದಲ್ಲಿ ಕ್ರಮ
Action taken at a cost of Rs. 34 crore in Bada and Gudda Channapur
ಬಾಡ ಹಾಗೂ ಗುಡ್ಡದ ಚನ್ನಾಪುರ ರೂ.34 ಕೋಟಿ ವೆಚ್ಚದಲ್ಲಿ ಕ್ರಮ
ಶಿಗ್ಗಾವಿ 11 : ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಬಾಡ ಹಾಗೂ ಗುಡ್ಡದ ಚನ್ನಾಪುರ ರೂ.34 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಳಗಾವಿ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಫಠಾಣ್ ಯಾಸೀರ್ ಅಹ್ಮದ್ ಖಾನ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ ಸುವರ್ಣ ವಿಧಾನಸೌಧ ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಕನಕದಾಸರ ಹುಟ್ಟೂರು ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳನ್ನು ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಕಾಗಿನೆಲೆ ಪ್ರಾಧಿಕಾರದ ಅಭಿವೃದ್ಧಿಗೆ ರೂ.34 ಕೋಟಿ ಬಿಡುಗಡೆ ಮಾಡಿದ್ದು, ಈ ಅನುದಾನವನ್ನು ಬಳಿಸಿ ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. 2016ರಲ್ಲಿ ಕಾಗಿನೆಲೆ ಪ್ರಾಧಿಕಾರ ಸ್ಥಾಪನೆ ಮಾಡಲಾಗಿತ್ತು. ಅಂದೇ ಬಾಡ ಹಾಗೂ ಗುಡ್ಡದ ಚೆನ್ನಾಪುರ ಗ್ರಾಮಗಳು ಪ್ರಾಧಿಕಾರದ ವ್ಯಾಪ್ತಿಯಲ್ಲಿದ್ದವು. ಸರ್ಕಾರ ಕಾಗಿನೆಲೆ ಅಭಿವೃದ್ಧಿಗೆ ಬದ್ಧವಿದೆ ಎಂದರು. ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಕಾಗಿನೆಲೆ ಅಭಿವೃದ್ಧಿಗೆ ರೂ.34 ಕೋಟಿ ಬಿಡುಗಡೆ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಜಾನಪದ ವಿಶ್ವವಿದ್ಯಾನಿಲಯಕ್ಕೆ ಕನಕದಾಸರ ಹೆಸರು ಇಡುವಂತೆ ಇದೇ ಸಂದರ್ಭದಲ್ಲಿ ಶಾಸಕ ಪಠಾಣ್ ಯಾಸೀರ್ ಆಹ್ಮದ್ ಖಾನ್ ಮನವಿ ಮಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 