ಬೆಂಗಳೂರು-ಮೈಸೂರ ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ವಿನ್ಯಾಸ ನಕ್ಷೆ ಅನುಮೋದನೆಗೆ ಕ್ರಮ
Action taken for approval of design map under the jurisdiction of Bangalore-Mysore Infrastructure Co
ಬೆಳಗಾವಿ ಸುವರ್ಣ ವಿಧಾನಸೌಧ ಡಿ.18: ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ರೈತರ ಅನುಕೂಲಕ್ಕಾಗಿ ಕ್ರಮ ವಹಿಸಲಾಗಿದ್ದು, ವಿನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಪ್ರಾಧಿಕಾರದಿಂದ ನಿಯಮಾನುಸಾರ ಅನುಮೋದನೆ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹೇಳಿದರು.
ಪರಿಷತ್ತಿನಲ್ಲಿ ಸದಸ್ಯರಾದ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,
ಬಿಎಂಐಸಿಎಪಿಎ ವ್ಯಾಪ್ತಿಯ ರೈತರಿಗೆ ಮನೆ ಕಟ್ಟಲು, ಭೂ ಪರಿವರ್ತನೆ ಮತ್ತು ವಿನ್ಯಾಸ ನಕ್ಷೆ ಅನುಮೋದನೆ ಅಥವಾ ಭೂ ಉಪಯೋಗ ಬದಲಾವಣೆ ಪಡೆಯಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆನ್ ಲೈನ್ ಮುಖಾಂತರ ಪ್ರಾಧಿಕಾರದಲ್ಲಿ ಸ್ವೀಕೃತಗೊಳ್ಳುವ ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ಪರೀಶೀಲಿಸಿ ನಿಗದಿತ ಅವಧಿಯಲ್ಲಿ ತಾಂತ್ರಿಕ ಅಭಿಪ್ರಾಯ ನೀಡಲಾಗುತ್ತಿದೆ. ಭೂ ಉಪಯೋಗ ಬದಲಾವಣೆ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರೀಶೀಲಿಸಿ ಕ್ರಮವಹಿಸಲಾಗುತ್ತಿದೆ ಎಂದರು.ಬಿಎಂಐಸಿಎಪಿಎ ಈಗಲೂ ಚಾಲ್ತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ ಉಪ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮೆ.ನೈಸ್ ಸಂಸ್ಥೆಯ ಮಧ್ಯೆ ಫ್ರೇಮ್ ವರ್ಕ್ ಅಗ್ರಿಮೆಂಟ್ ಅನ್ವಯ, ಬಿಎಂಐಸಿ ಕಾರಿಡಾರ್ ನಲ್ಲಿ ಬರುವ ಬೆಳವಣಿಗೆಗಳನ್ನು ಯೋಜನಾ ಬದ್ಧವಾಗಿ ಕಾರ್ಯಗತಗೊಳಿಸಲು ಪ್ರಾಧಿಕಾರದ ಅಗತ್ಯತೆ ಇರುತ್ತದೆ ಎಂದು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 