ಕೊಪ್ಪಳ: ಸ್ವಾಮಿ ವಿವೇಕಾನಂದರು 1893 ರ ಸೆ. 11 ರಂದು ಚಿಕ್ಯಾಗೋ ದಲ್ಲಿ ಜರುಗಿದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಐತಿಹಾಸಿಕ ಭಾಷಣ ನೀಡಿ ಇದೇ ಸೆ. 11 ಕ್ಕೆ 125 ವರ್ಷಗಳು ಘಟಿಸಿದ್ದು, ಇದರ ಸವಿನೆನಪಿಗಾಗಿ ಸೆ. 11 ರಿಂದ ಒಂದು ವರ್ಷಗಳ ಕಾಲ ಇದರ ವಾಷರ್ಿಕೋತ್ಸವವನ್ನು ಹಲವು ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಹೇಳಿದರು.
ಸ್ವಾಮಿ ವಿವೇಕಾನಂದರ ವಿಶ್ವಧರ್ಮ ಸಮ್ಮೇಳನ ಭಾಷಣದ 125 ನೇ ವಾಷರ್ಿಕೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು 1893 ರ ಸೆ. 11 ರಂದು ಚಿಕ್ಯಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ, ಭಾರತದ ತತ್ವಾದರ್ಶಗಳನ್ನು ಹೃದಯಸ್ಪಶರ್ಿಯಾಗಿ ಸಮ್ಮೇಳನದಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳಿಗೆ ತಿಳಿಯಪಡಿಸುವ ಮೂಲಕ ಜಗದ್ವಿಖ್ಯಾತಿಯಾಗಿದ್ದರು. ಈ ಐತಿಹಾಸಿಕ ಭಾಷಣ ನೀಡಿ 2018 ರ ಸೆ. 11 ಕ್ಕೆ 125 ವರ್ಷಗಳಾಗಿದ್ದು, ಇದೇ ಸೆ. 11 ರಿಂದ 2019 ರ ಸೆ. 11 ರವರೆಗೆ ಇದರ ವಾಷರ್ಿಕೋತ್ಸವವನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಜೊತೆಗೂಡಿ ಅರ್ಥಪೂರ್ಣವಾಗಿ ಆಚರಿಸಲು ಸಕರ್ಾರ ನಿರ್ಧರಿಸಿದೆ. ಯುವ ಪೀಳಿಗೆಗೆ ಹಾಗೂ ಸಾರ್ವಜನಿಕರಿಗೆ ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ವಿಶ್ವಶಾಂತಿ ಮತ್ತು ವಿವಿಧತೆಯಲ್ಲಿ ಏಕತೆಯ ಬಗ್ಗೆ ಚಿಕ್ಯಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಅವರು ಮಾಡಿರುವ ಭಾಷಣದ ತುಣುಕುಗಳನ್ನು ಹಾಗೂ ಸಾರ್ವಜನಿಕ ಸಭೆಗಳಲ್ಲಿ ಮಾಡಿರುವ ಭಾಷಣಗಳನ್ನು ತಲುಪಿಸುವುದು ಅವಶ್ಯವಾಗಿದೆ. ಇಂತಹ ಮಹತ್ವದ ಕಾರ್ಯಕ್ರಮಕ್ಕೆ ಇದೇ ಸೆ. 11 ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಎಲ್ಲ ಸಂಘ, ಸಂಸ್ಥೆಗಳು, ನಾಗರಿಕರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸ್ವಾಮಿ ವಿವೇಕಾನಂದರ ಸಂದೇಶವನ್ನು ಜನರಿಗೆ ತಲುಪಿಸಲು ಸಹಕರಿಸಬೇಕು. ಎಲ್ಲ ನಗರ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು, ಶಾಲಾ ಕಾಲೇಜುಗಳಲ್ಲಿ ವಿಚಾರಸಂಕಿರಣ, ಜಾಗೃತಿ ಜಾಥಾ, ಭಾಷಣ ಸ್ಪಧರ್ೆ, ಪ್ರಬಂಧ ಸ್ಪಧರ್ೆ, ಚಿತ್ರಕಲೆ ಸ್ಪಧರ್ೆಯನ್ನು ಆಯೋಜಿಸಬೇಕು. ಯುವಜನರಲ್ಲಿ ಅರಿವು ಮೂಡಿಸುವ ಬಗ್ಗೆ ಭಾಷಣ, ಚಚರ್ಾಕೂಟದಂತಹ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದಲ್ಲಿ ಏಕತೆಯ ಭಾವನೆಯನ್ನು ಪಸರಿಸಲು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪ.ಪೂ. ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕೈಜೋಡಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳದ ರಾಮಕೃಷ್ಣ ಮಿಷನ್ ಆಶ್ರಮದ ಚೈತನ್ಯಾನಂದ ಸ್ವಾಮಿಗಳು ಮಾತನಾಡಿ, ಸ್ವಾಮಿ ವಿವೇಕಾನಂದರ ಸಂದೇಶವನ್ನು ಜಿಲ್ಲೆಯಾದ್ಯಂತ ಬಿತ್ತರಿಸಲು ಅಗತ್ಯ ಕಿರುಹೊತ್ತಿಗೆ, ಕಿರುಚಿತ್ರವನ್ನು ಪೂರೈಸಲಾಗುವುದು ಅಲ್ಲದೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವಿಷಯಗಳನ್ನು ತಲುಪಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಮಂಜುನಾಥ ಗೊಂಡಬಾಳ, ರಾಕೇಶ್ ಕಾಂಬ್ಳೆ ಅವರು ಮಾತನಾಡಿ, ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಜೀವನ ಮೌಲ್ಯಗಳನ್ನು ಸಾರ್ವಜನಿಕರಿಗೆ ವ್ಯಾಪಕವಾಗಿ ತಲುಪಿಸಲು ನೆಹರು ಯುವ ಕೇಂದ್ರ ಸೇರಿದಂತೆ ಹಲವು ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ರೂಪಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ರಾಜೇಶ್ ನಾಡಿಗೇರ ಅವರು, ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಸಮಗ್ರ ವಿವರಣೆ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಯುವ ಪ್ರಶಸ್ತಿ ವಿಜೇತರು ಸಭೆಯಲ್ಲಿ ಭಾಗವಹಿಸಿದ್ದರು.