ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ
Action to increase honorarium of Anganwadi workers: Minister Lakshmi Hebbalkar promised
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು
ಬೆಂಗಳೂರು 08: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು.ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 