ಆರ್‌ಟಿಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕ್ರಮ: ರಾಮಲಿಂಗಾರೆಡ್ಡಿ
Action to prevent the menace of middlemen in RTO offices said Ramalinga Reddy
ಬೆಳಗಾವಿ ಸುವರ್ಣಸೌಧ ಡಿ.10: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‌ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್‌ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರೀಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.
ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದೇವೆ.
ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಯ ಅಧಿಕಾರಿ/ ಸಿಬ್ಬಂದಿಯವರನ್ನು ಭೇಟಿ ಮಾಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್‌ಟಿಓ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಲೋಕಾಯುಕ್ತರವರ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ದಿನಾಂಕ 01-11-2021 ರಿಂದ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 